25.1 C
Bangalore
Friday, December 6, 2019

ಉಳಿಯುವುದೇ ಘನತೆ?

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಬೆಂಗಳೂರು: ಐದಾರು ವರ್ಷಗಳಿಂದ ಕಳಂಕವನ್ನೆಲ್ಲ ಕಳಚಿಕೊಳ್ಳುತ್ತ ಘನತೆ ಹೆಚ್ಚಿಸಿಕೊಳ್ಳುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಈ ಬಾರಿ ಅದೇ ಗುಣಮಟ್ಟವನ್ನು ಕಾಯ್ದುಕೊಳ್ಳಲು ವಿಫಲವಾಗುವುದೇ ಎಂಬ ಅನುಮಾನ ಕಾಡತೊಡಗಿದೆ.

ರಾಜ್ಯ ಏಕೀಕರಣವಾದ ವರ್ಷಕ್ಕೆ ಅನುಗುಣವಾಗಿ 63 ಸಾಧಕರಿಗೆ ಪ್ರಶಸ್ತಿ ನೀಡಲು ಕೇವಲ 9 ದಿನ ಬಾಕಿ ಇದ್ದರೂ ಒಂದು ಸಭೆಯನ್ನೂ ನಡೆಸದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆ ಅನೇಕ ಪ್ರಶ್ನೆಗಳನ್ನೆತ್ತಿದೆ. ಸಾಧಕರನ್ನು ಕೂಲಂಕಷವಾಗಿ ಪರಿಶೀಲಿಸದೆ ಆತುರಾತುರದಲ್ಲಿ ಪಟ್ಟಿ ಅಂತಿಮಗೊಳಿಸಿ ಮತ್ತದೇ ಕರಾಳ ಇತಿಹಾಸಕ್ಕೆ ಜಾರುವುದೇ ಎಂಬ ಆತಂಕ ಎದುರಾಗಿದೆ.

ಸಲಹಾ ಸಮಿತಿ: ಮೊದಲ ಹಂತದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿ, ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಆಯ್ಕೆ ಸಮಿತಿ ರಚನೆ ಕಾರ್ಯ ನಡೆಯಬೇಕು. ಸಲಹಾ ಸಮಿತಿ ಐದಾರು ಸಭೆಗಳನ್ನು ನಡೆಸಬೇಕು. ಪ್ರಶಸ್ತಿ ನೀಡುವಂತೆ ಸಲ್ಲಿಕೆಯಾಗಿರುವ ಸಾವಿರಾರು ಅರ್ಜಿಗಳ ಪರಿಶೀಲನೆ ಜತೆಗೆ ಅರ್ಜಿ ಸಲ್ಲಿಸದಿದ್ದರೂ ನಿರ್ದಿಷ್ಟ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿರುವವರನ್ನು ಗುರುತಿಸಿ ಪಟ್ಟಿ ಮಾಡುವ ಹೊಣೆ ಈ ಸಮಿತಿಯದ್ದು. ಈ ಬಾರಿ ಅಕ್ಟೋಬರ್ ಎರಡನೇ ವಾರದವರೆಗೂ ಸಮಿತಿ ರಚನೆ ಕಾರ್ಯಕ್ಕೇ ಮುಂದಾಗದ ಇಲಾಖೆ, ಐದಾರು ದಿನದ ಹಿಂದಷ್ಟೇ ಈ ಕಾರ್ಯಕ್ಕೆ ಮುಂದಾಗಿದ್ದು, ಇನ್ನೂ ಸಭೆಯಾಗಿಲ್ಲ. ಈಗಾಗಲೇ 500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎನ್ನಲಾಗಿದ್ದು, ಇವೆಲ್ಲವನ್ನೂ ಪರಿಶೀಲಿಸಿ ಪಟ್ಟಿ ಮಾಡಬೇಕಿದೆ.

ಹೈಕೋರ್ಟ್ ವೇಳಾಪಟ್ಟಿ ಉಲ್ಲಂಘನೆ?: 2016ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಕುರಿತು ನೀಡಿದ ತೀರ್ಪಿನಲ್ಲಿ, ಈ ಕುರಿತು ಸ್ಪಷ್ಟ ಮಾರ್ಗಸೂಚಿಯನ್ನು ಸ್ವತಃ ಹೈಕೋರ್ಟ್ ಸಿದ್ಧಪಡಿಸಿಕೊಟ್ಟಿದೆ. ಪ್ರಶಸ್ತಿಗೆ ಅನುಸರಿಸಬೇಕಾದ ಮಾನದಂಡ, ಅರ್ಹತೆ, ವಯೋಮಾನ ಸೇರಿ 19 ಅಂಶಗಳನ್ನು ತಿಳಿಸಿದೆ. ಇದೇ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿ ಅಧಿಕೃತ ಮುದ್ರೆಯೊತ್ತಿದೆ. ಅದರ ಪ್ರಕಾರ ಪ್ರತಿ ವರ್ಷ ಸೆ.1ರಿಂದ ಸೆ.30ರವರೆಗೆ ಸ್ವಯಂಪ್ರೇರಿತವಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಬೇಕು.

ಅ.1ರಿಂದ 15ರವರೆಗೆ ಆಯ್ಕೆ ಸಲಹಾ ಸಮಿತಿ ಪರಿಶೀಲಿಸಿ, 1:2 ಅನುಪಾತದಲ್ಲಿ ಅಂದರೆ ಆ ವರ್ಷ ನೀಡಬೇಕಿರುವ ಪ್ರಶಸ್ತಿಗೆ ಎರಡು ಪಟ್ಟು ಹೆಸರನ್ನು ಸಿಎಂ ಅಧ್ಯಕ್ಷತೆಯ ಆಯ್ಕೆ ಸಮಿತಿಗೆ ಸಲ್ಲಿಸಬೇಕು. ಸಿಎಂ ಅಧ್ಯಕ್ಷತೆಯ ಸಮಿತಿ ಅ.25ರವರೆಗೂ ಪರಿಶೀಲಿಸಿ ಹೆಸರು ಅಂತಿಮಗೊಳಿಸಬೇಕು. ಆದರೆ, ಈ ವರ್ಷ ಮೂರನೇ ವಾರವಾದರೂ ಒಂದೂ ಸಭೆ ನಡೆದಿಲ್ಲ.

63 ಸಾಧಕರಿಗೆ ಪ್ರಶಸ್ತಿ ಪ್ರದಾನ

ರಾಜ್ಯೋತ್ಸವ ಪ್ರಶಸ್ತಿ ಎಂದ ಕೂಡಲೆ ‘ಪಡೆದುಕೊಂಡಿದ್ದಾ, ಹೊಡೆದುಕೊಂಡಿದ್ದಾ?’ ಎಂಬ ಮಾತುಗಳಿದ್ದವು. ರಾಜಕೀಯ ನೇತಾರರ ಇಚ್ಛಾಶಕ್ತಿ ಕಾರಣಕ್ಕೆ ಐದಾರು ವರ್ಷಗಳಲ್ಲಿ ಈ ಪರಿಸ್ಥಿತಿಯಲ್ಲಿ ಸಾಕಷ್ಟು ಬದಲಾಗಿದೆ. ಪ್ರಸಕ್ತ ವರ್ಷದ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಹಿಂದೆ ನಡೆಸಿಕೊಂಡು ಬಂದಿರುವಂತೆ ಹಾಗೂ ಹೈಕೋರ್ಟ್ ಆದೇಶದಂತೆ 63 ಸಾಧಕರಿಗೆ ಪ್ರಶಸ್ತಿ ನೀಡಬೇಕು. ಸಾಮಾನ್ಯವಾಗಿ ಅ.1ರಿಂದಲೇ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗಳು ಚಾಲನೆಗೊಳ್ಳುತ್ತಿದ್ದವು.

ಸಿಎಸ್ ಅಂಗಳದಲ್ಲಿ ಜಿಜ್ಞಾಸೆ

ಈಗಾಗಲೇ ವಿಳಂಬಗತಿಯಲ್ಲಿ ಸಾಗುತ್ತಿರುವ ರಾಜ್ಯೋತ್ಸವ ಪ್ರಶಸ್ತಿಗೆ ಚುನಾವಣೆ ಬಿಸಿಯೂ ತಟ್ಟಿದೆ. ಉಪಚುನಾವಣೆ ನಡೆಯುತ್ತಿರುವ ಐದು ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡಲು ಚುನಾವಣಾ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲವೇ ಎಂಬ ಅನುಮಾನ ಕಾಡಿದೆ. ಶಿವಮೊಗ್ಗ ಜಿಲ್ಲೆಗೆ ನಿರ್ದಿಷ್ಟವಾಗಿ ವ್ಯಕ್ತಿಯೊಬ್ಬರು ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಪ್ರಶಸ್ತಿ ನೀಡುವುದು ಸರಿಯೇ ಎಂಬ ಪ್ರಶ್ನೆ ಎದ್ದಿದೆ. ಈ ಪತ್ರ ಸದ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿದ್ದು, ಸದ್ಯದಲ್ಲೇ ತೀರ್ಮಾನ ತಿಳಿಸಲಿದ್ದಾರೆ. ಚುನಾವಣಾ ಆಯೋಗದ ಅನುಮತಿಯನ್ನೂ ಪಡೆಯಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...