More

    ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 5 ಹಾಡುಗಳ ಗಾಯನ

    ಸಿರವಾರ: ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಅಧಿಕಾರಿಗಳಿಗೆ ತಹಸೀಲ್ದಾರ್ ರವಿ ಎಸ್.ಅಂಗಡಿ ಸೂಚಿಸಿದರು.

    ತಹಸಿಲ್ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಗುರುವಾರ ಮಾತನಾಡಿದರು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದ 50ನೇ ರಾಜ್ಯೋತ್ಸವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ 5 ಹಾಡುಗಳನ್ನು ಹಾಡುವುದರ ಮೂಲಕ ಆರಂಭಿಸಬೇಕು. ಬಸವ ವೃತ್ತದಿಂದ ನೀರಾವರಿ ಕಚೇರಿವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ ಎಂದರು.

    ಕನ್ನಡ ವಿಷಯದಲ್ಲಿ ಹೆಚ್ಚು ಅಂಕಗಳು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ತಾಲೂಕು ಆಡಳಿತದಿಂದ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಸಲಾಗುವುದು. ನಂತರ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಗುವುದು ಎಂದು ತಹಸೀಲ್ದಾರ್ ತಿಳಿಸಿದರು. \

    ತಾಪಂ ಇಒ ಶರ್ಪುನ್ನಿಸಾ ಬೇಗಂ, ಸಹಾಯಕ ನಿರ್ದೇಶಕ ಬಸವರಾಜ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಯ್ಯನಗೌಡ ಏರೆಡ್ಡಿ, ಶಿರಸ್ತೇದಾರ್ ಫಕೃದ್ದೀನ್, ಕಂದಾಯ ನಿರೀಕ್ಷಕ ಶ್ರೀನಾಥ, ವೀರೇಶ, ವಿಲ್ಸನ್, ದೈಹಿಕ ಶಿಕ್ಷಣ ಶಿಕ್ಷಕ ಮಹೆಬೂಬ್, ಕರವೇ ತಾಲೂಕು ಅಧ್ಯಕ್ಷ ರಾಘವೇಂದ್ರ ಖಾಜನಗೌಡ, ವೆಂಕಟೇಶ ಶಂಕ್ರಿ, ಡಿ.ಯಮನೂರು, ಅರಳಪ್ಪ ಯದ್ದಲದಿನ್ನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts