

ಮುಂಬೈ: ಸದಾ ಒಂದಿಲ್ಲೊಂದು ಗೊಂದಲದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುವ ಬಾಲಿವುಡ್ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಖಿ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಿಯಕರ ಆದಿಲ್, ಆಕೆ ಡ್ರಾಮಾ ಮಾಡುತ್ತಿದ್ದಾಳೆ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ
ಈ ಕುರಿತು ಮಾತನಾಡಿದ ಆದಿಲ್, ಬಂಧನದ ಭೀತಿಯಿಂದ ಆಕೆ ಈ ರೀತಿ ನಾಟಕ ಮಾಡುತ್ತಿದ್ದಾಳೆ. ಜೈಲಿಗೆ ಹೋಗುವುದನ್ನು ತಪ್ಪಿಸಲು ಆಸ್ಪತ್ರೆಯಲ್ಲಿ ಮಲಗಿದ್ದಾಳೆ. ಆಕೆ ಗಾಢ ನಿದ್ರೆ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಆರೋಪಿಸಿದ್ದಾರೆ.
ತೀವ್ರ ಎದೆ ನೋವು ಕಾಣಿಸಿಕೊಂಡ ಪರಿಣಾಮ ಕೆಲ ದಿನಗಳ ಹೊಂದೆ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ಆಕೆಯ ಆರೋಗ್ಯದ ಕುರಿತು ವೈದ್ಯರು ಅಥವಾ ಕುಟುಂಬ ಸದಸ್ಯರು ಯಾವುದೇ ಮಾಹಿತಿ ನೀಡಿಲ್ಲ.