More

    ರಕ್ಷಾ ಸಾವಿನ ಪ್ರಕರಣ ಸಿಒಡಿ ತನಿಖೆಗೆ

    ಉಡುಪಿ: ಖಾಸಗಿ ಆಸ್ಪತ್ರೆ ವೈದ್ಯಕೀಯ ನಿರ್ಲಕ್ಷೃದಿಂದಾಗಿ ಮೃತಪಟ್ಟ ಆರೋಪವಿರುವ ಇಂದಿರಾನಗರ, ಕುಕ್ಕಿಕಟ್ಟೆ ನಿವಾಸಿ ರಕ್ಷಾ (26) ಅವರ ಸಾವಿನ ಪ್ರಕರಣವನ್ನು ಸಿಒಡಿ ತನಿಖೆ ನಡೆಸಲು ಗೃಹಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಶಾಸಕ ಕೆ.ರಘುಪತಿ ಭಟ್, ವೈದ್ಯಕೀಯ ನಿರ್ಲಕ್ಷೃದಿಂದಾಗಿ ರಕ್ಷಾ ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮನವಿಯಂತೆ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ. ಸೋಮವಾರ ಸಾಯಂಕಾಲದೊಳಗೆ ಈ ಬಗ್ಗೆ ಆದೇಶ ಜಾರಿಯಾಗಲಿದೆ ಎಂದು ತಿಳಿಸಿದರು. ಅಲ್ಲದೇ ವೈದ್ಯಕೀಯ ನಿರ್ಲ್ಯಕ್ಷದಂತ ಪ್ರಕರಣಗಳು ಸಂಭವಿಸಿದಾಗ ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರದ ಮಟ್ಟದಲ್ಲಿ ನುರಿತ ವೈದ್ಯರ ತಂಡ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಬೇಕಾಗುತ್ತದೆ. ಅದರಂತೆ ಜಿಲ್ಲಾಸ್ಪತ್ರೆ ವೈದ್ಯ ಡಾ.ಚಂದ್ರಶೇಖರ ಅಡಿಗ ನೇತೃತ್ವ 7 ನುರಿತ ವೈದ್ಯರ ಸಮಿತಿ ರಚಿಸಿ ಈ ಬಗ್ಗೆ ತನಿಖೆ ನಡೆಸಲಾಗುವುದು. 5 ದಿನದ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ಘಟನೆ ಏನು ?: ರಕ್ಷಾ ಅವರು ಎರಡು ಮೂರು ದಿನ ಮೈಗ್ರೇನ್‌ನಿಂದ ಬಳಲುತ್ತಿದ್ದರು. ತಲೆನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚುಚ್ಚುಮದ್ದು ನೀಡಿ ಮನೆಗೆ ಕಳುಹಿಸಿದ್ದರು. ಮನೆಗೆ ಬಂದು ಮಲಗಿದ್ದು, ಬೆಳಗ್ಗೆ 8.45ರ ಸಮಯದಲ್ಲಿ ಯಾವ ಸ್ಪಂದನೆಯೂ ಇಲ್ಲದೆ ಬಾಯಲ್ಲಿ ನೊರೆ ಬರುತ್ತಿತ್ತು. ಕೂಡಲೇ ಚಿಕಿತ್ಸೆ ನೀಡಿದ್ದ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಇನ್ನೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಇನ್ನೊಂದು ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಅಲ್ಲಿಂದ ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿತ್ತು. ಪತಿ, ಮತ್ತು ಊರಿನ ಸ್ಥಳೀಯರು ವೈದ್ಯಕೀಯ ನಿರ್ಲ್ಯಕ್ಷದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts