More

    ರಾಮಲಲ್ಲಾ ವಿಗ್ರಹವು ಮಗುವಿನಂತೆ ಕಾಣಿಸುತ್ತಿಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಬಿಜೆಪಿ ಆಕ್ರೋಶ

    ಭೋಪಾಲ್: ಹೊಸದಾಗಿ ಕೆತ್ತಲಾಗಿರುವ ರಾಮಲಲ್ಲಾ ವಿಗ್ರಹವು ಮಗುವಿನಂತೆ ಕಾಣುತ್ತಿಲ್ಲ ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಶುಕ್ರವಾರ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಸದ್ಯ ಈ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹೊಸ ಸಮರ ಶುರುವಾಗಿದೆ. ಬಾಲ ರಾಮನ ವಿಗ್ರಹದ ಕುರಿತಾಗಿ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿಚಾರ ಸಂಬಂಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಕೂಡಾ ಕಾಂಗ್ರೆಸ್ ನಾಯಕರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

    ದೇವಸ್ಥಾನದಲ್ಲಿರುವ ರಾಮಲಲ್ಲಾ ವಿಗ್ರಹವು ಮಗುವಿನ ರೂಪದಂತೆ ಕಾಣುತ್ತಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. “ನಾನು ಮೊದಲಿನಿಂದಲೂ ಇದನ್ನು ಹೇಳುತ್ತಿದ್ದೇನೆ, ವಿವಾದಿತ ಮತ್ತು ಧ್ವಂಸಗೊಂಡ ರಾಮಲಲ್ಲಾ ವಿಗ್ರಹ ಎಲ್ಲಿದೆ? ಎರಡನೇ ಪ್ರತಿಮೆಯ ಅಗತ್ಯ ಏನಿತ್ತು? ದ್ವಾರಕ ಮತ್ತು ಜೋಶಿಮಠದ ನಮ್ಮ ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಜೀ ಮಹಾರಾಜ್ ಅವರು ರಾಮ ಜನ್ಮಭೂಮಿ ದೇವಸ್ಥಾನದಲ್ಲಿರುವ ಶ್ರೀರಾಮನ ವಿಗ್ರಹವು ಮಗುವಿನ ರೂಪದಲ್ಲಿರಬೇಕು ಮತ್ತು ತಾಯಿ ಕೌಶಲ್ಯೆಯ ಮಡಿಲಲ್ಲಿರಬೇಕು ಎಂದು ಸಲಹೆ ನೀಡಿದ್ದರು. ಆದರೆ ಪ್ರತಿಷ್ಠಾಪಿಸುತ್ತಿರುವ ವಿಗ್ರಹವು ಮಗುವಿನಂತೆ ಕಾಣುತ್ತಿಲ್ಲ ” ಎಂದು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಟ್ರಸ್ಟ್‌ ಸದಸ್ಯ ಕಮಲೇಶ್ವರ್ ಚೌಪಾಲ್, ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗಳಿಗೆ ಯಾವುದೇ ಕಾರಣಕ್ಕೂ ಪ್ರಾಮುಖ್ಯತೆ ನೀಡಬೇಡಿ. ಅವರ ಹೇಳಿಕೆಗಳು ಯಾವಾಗಲೂ ಅಸಂಬದ್ದ ಆಗಿರುತ್ತದೆ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವ ರೀತಿ ಅವರು ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

    ದೇವಾಲಯದ ಗರ್ಭಗುಡಿಯಲ್ಲಿರುವ ವಿಗ್ರಹ
    ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ, ಗುರುವಾರ ಅಯೋಧ್ಯೆಯ ದೇವಾಲಯದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನು ಇರಿಸಲಾಗಿದೆ. 

    51 ಇಂಚು ಎತ್ತರವಿರುವ ಪ್ರತಿಮೆ
    ಗುರುವಾರ ಬಟ್ಟೆಯಿಂದ ಮುಚ್ಚಿದ ವಿಗ್ರಹದ ಮೊದಲ ಚಿತ್ರ ಬಹಿರಂಗವಾಯಿತು. ಕರ್ನಾಟಕದ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು ‘ರಾಮಲಲ್ಲಾ’ ವಿಗ್ರಹವನ್ನು ಕೆತ್ತಿದ್ದಾರೆ. ಪ್ರತಿಮೆಯು 51 ಇಂಚು ಎತ್ತರ ಮತ್ತು 1.5 ಟನ್ ತೂಕವಿದೆ. ಏತನ್ಮಧ್ಯೆ, ಜನವರಿ 22 ರಂದು ನಡೆಯಲಿರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಿದ್ಧತೆಗಾಗಿ ಗುರುವಾರ ಅಯೋಧ್ಯೆ ನಗರವನ್ನು ಹೂವುಗಳಿಂದ ಅಲಂಕರಿಸಲಾಗಿದೆ.

    ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ
    ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಣ ಪ್ರತಿಷ್ಠಾ’ ಸ್ಮರಣಾರ್ಥ ಧಾರ್ಮಿಕ ವಿಧಿಗಳನ್ನು ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಪುರೋಹಿತರ ತಂಡವು ಪ್ರಧಾನ ಧಾರ್ಮಿಕ ವಿಧಿಗಳನ್ನು ನಡೆಸಲಿದೆ. ಸಮಾರಂಭಕ್ಕೆ ಹಲವು ಸೆಲೆಬ್ರಿಟಿಗಳಿಗೂ ಆಹ್ವಾನ ನೀಡಲಾಗಿದೆ. 

    ರಾಮನ ವಿಗ್ರಹದ ಫೋಟೋ ಹಂಚಿಕೊಂಡ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಂತಸ ವ್ಯಕ್ತಪಡಿಸಿದ್ದು ಹೀಗೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts