More

    ಮೈ ಕೊರಿಯುವ ಚಳಿಯಿಂದ ರಕ್ಷಿಸಲು ಅಯೋಧ್ಯೆಯಲ್ಲಿ ವಿಶೇಷ ವ್ಯವಸ್ಥೆ

    ಅಯೋಧ್ಯೆ: ಭವ್ಯ ರಾಮಮಂದಿರ ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿ ಇವೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಿದ್ದಾರೆ.

    ಇದನ್ನೂ ಓದಿ:ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚಿರತೆ ಸಾವು

    ಇಡೀ ದೇಶದಲ್ಲಿ ಈಗಾಗಲೇ ಸಮಾರಂಭದ ಬಗ್ಗೆ ಉತ್ಸಾಹದ ವಾತಾವರಣವಿದೆ. ಪ್ರತಿಷ್ಠಾಪನೆ ಸಮಾರಂಭಕ್ಕೆ ಭರದಿಂದ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ದೇಶದಾದ್ಯಂತ ಅನೇಕ ಗಣ್ಯ ವ್ಯಕ್ತಿಗಳು ಶ್ರೀರಾಮನ ದರ್ಶನಕ್ಕಾಗಿ ಇಲ್ಲಿಗೆ ಬರಲಿದ್ದಾರೆ.

    ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ, ದೆಹಲಿ, ಪಂಜಾಬ್​, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಶೀತಗಾಳಿ ಬೀಸುತ್ತಿದೆ. ಪಶ್ಚಿಮ ಹಿಮಾಲಯ ಭಾಗದಿಂದ ಬೀಸಿದ ಗಾಳಿಯಿಂದ ಚಳಿ ಮತ್ತಷ್ಟು ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಈ ಪರಿಸ್ಥಿತಿಯಲ್ಲಿ ಹೆಚ್ಚುತ್ತಿರುವ ಚಳಿ ಹಾಗೂ ತಾಪಮಾನ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಹೊಸ ಐಡಿಯಾವೊಂದನ್ನು ಕಂಡುಕೊಂಡಿದೆ. ಈ ಚಳಿಯನ್ನು ಗಮನದಲ್ಲಿಟ್ಟುಕೊಂಡು ಅಯೋಧ್ಯೆಯಲ್ಲಿ ವಿಶೇಷ ವ್ಯವಸ್ಥೆಯೊಂದನ್ನು ಮಾಡಲಾಗಿದೆ.

    ಶ್ರೀರಾಮ ಭಕ್ತರನ್ನು ಚಳಿಯಿಂದ ರಕ್ಷಿಸಲು ಈ ಕ್ರಮ ಕೈಗೊಂಡಿದ್ದು ಅಯೋಧ್ಯೆಯಾದ್ಯಂತ ಹಲವು ಸ್ಥಳಗಳಲ್ಲಿ ಸ್ವಲ್ಪ ಕೆಂಪು ಬಣ್ಣದಲ್ಲಿರುವ ಹೊರಾಂಗಣ ಹೀಟರ್‌ಗಳನ್ನು ಅಳವಡಿಸಲಾಗಿದೆ. ಇದು ತಾಪಮಾನವು ಕುಸಿಯುತ್ತಿರುವ ನಡುವೆ ಜನರು ಬೆಚ್ಚಗಾಗಲು ಸಹಾಯ ಮಾಡುತ್ತದೆ. ಈ ಹೀಟರ್‌ಗಳಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿಯೂ ಜನರು ಚಳಿಯನ್ನು ಅನುಭವಿಸುವುದಿಲ್ಲ. ಹೀಗಾಗಿ ಅವರು ಆರಾಮವಾಗಿ ರಾಮಲಲ್ಲಾನ ದರ್ಶನವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಹೀಟರ್‌ಗಳನ್ನು ಮುನ್ಸಿಪಲ್ ಕಾರ್ಪೊರೇಶನ್ ಅಯೋಧ್ಯೆ ಸ್ಥಾಪಿಸಿದೆ.

    ದೇವಾಲಯದ ಟ್ರಸ್ಟ್ ಪ್ರಕಾರ, ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜಕಾರಣಿಗಳು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು, ಸಂತರು ಮತ್ತು ವಿವಿಧ ದೇಶಗಳ ಸುಮಾರು 100 ಪ್ರತಿನಿಧಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

    ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕೇರಳ ಸಿಎಂ ಪಿಣರಾಯಿ ಪ್ರತಿಭಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts