ರಾಮಮಂದಿರ ನಿರ್ಮಾಣ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಶ್ರೀ ಸುಬುಧೇಂದ್ರ ತೀರ್ಥರು

ರಾಯಚೂರು: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ವಿಚಾರವನ್ನು ಯಾವುದೇ ಪಕ್ಷ ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿಪ್ರಾಯಪಟ್ಟಿದ್ದಾರೆ.

ರಾಮಮಂದಿರ ನಿರ್ಮಾಣ ಒತ್ತಾಯಪೂರ್ವಕವಾಗಿ ಮಾಡುವುದಲ್ಲ. ಎಲ್ಲಾ ಧರ್ಮದವರನ್ನು ವಿಶ್ವಾಸಕ್ಕೆ ಪಡೆಯಬೇಕು. ಸುಪ್ರೀಂ ಕೋರ್ಟ್​ನ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಂತ್ರಾಲಯ ಮಠ ಕೂಡಾ ಒತ್ತಾಯಿಸುತ್ತದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಹಂಪಿಯಲ್ಲಿ ಸಿಕ್ಕಿರುವ ಬೃಂದಾವನ ಮತ್ತು ಇತರ ಸಾಮಗ್ರಿಗಳು ಸುರೇಂದ್ರ ತೀರ್ಥರ ಮಠಕ್ಕೆ ಸೇರಿವೆ. ಈ ಬಗ್ಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರ, ಪುರಾತತ್ವ ಇಲಾಖೆ ಜತೆ ಚರ್ಚೆ‌ ನಡೆದಿದೆ. ಚರ್ಚೆ ಫಲಪ್ರದವಾದ ನಂತರ ಸುರೇಂದ್ರ ಮಠದಲ್ಲಿ ಬೃಂದಾವನ ಪುನರ್ ಪ್ರತಿಷ್ಠಾಪನೆ ಮಾಡಲಾಗುವುದು.

ತುಂಗಭದ್ರ ನದಿಗೆ ಬ್ಯಾರೇಜ್ ನಿರ್ಮಾಣಕ್ಕಾಗಿ ಈಗಾಗಲೇ ಆಂಧ್ರ ಪ್ರದೇಶ ಮತ್ತು ಕರ್ನಾಟಕ ಸರ್ಕಾರಗಳಿಗೆ ಪ್ರಸ್ತಾವನೆ ಹಾಗೂ ಯೋಜನೆಯ ವರದಿಯನ್ನು ಸಲ್ಲಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು, ಸರ್ಕಾರಗಳಿಗೆ ‌ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.