More

    ರಾಜ್ಯದ 27,500 ಹಳ್ಳಿ, 90 ಲಕ್ಷ ರಾಮಭಕ್ತರಿಂದ ಮಂದಿರಕ್ಕೆ ಧನ ಸಂಗ್ರಹಿಸುತ್ತೇವೆ- ವಿಹಿಂಪ

    ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಯೋಜನೆಯಂತೆ ಸಮಸ್ತ ಹಿಂದೂ ಸಮಾಜದ ನೆರವಿನೊಂದಿಗೆ ಮಂದಿರ ನಿರ್ಮಿಸಲು ವಿಶ್ವ ಹಿಂದೂ ಪರಿಷದ್(ವಿಹಿಂಪ) ತನ್ನ ಸಂಪೂರ್ಣ ಸಹಯೋಗ ನೀಡಲಿದೆ ಎಂದು ಅದರ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್​ ತಿಳಿಸಿದರು.

    ಸಾಕ್ಷ್ಯಚಿತ್ರ ಪ್ರದರ್ಶನ

    ದೇಶದ ಮೂಲೆಮೂಲೆಗಳಿಗೂ ಶ್ರಾವ್ಯ, ದೃಶ್ಯ ಮಾಧ್ಯಮದ ಮೂಲಕ ಮಾಹಿತಿಯನ್ನು ತಲುಪಿಸಲಾಗುವುದು. ಚಿತ್ರರಂಗ ಕ್ಷೇತ್ರದ ಪ್ರಖ್ಯಾತರಾದ ಡಾ. ಚಂದ್ರಪ್ರಕಾಶ್ ದ್ವಿವೇದಿ ರಾಮಮಂದಿರದ ಇತಿಹಾಸ, ಈ ಅಭಿಯಾನದ ಮಾಹಿತಿಗಳನ್ನು ಒಳಗೊಂಡ ಸಾಕ್ಷ್ಯಚಿತ್ರವನ್ನು ರಚಿಸಿದ್ದಾರೆ. ಈ ಸಾಕ್ಷ್ಯಚಿತ್ರವು ಖ್ಯಾತ ಸಿನಿಮಾ ನಟರಾದ ಶ್ರೀ ಅಕ್ಷಯ್ ಕುಮಾರ್ ಅವರ ಅಭಿಯಾನದ ಕುರಿತಾದ ನಿವೇದನೆ ಒಳಗೊಂಡಿರುತ್ತದೆ.

    ಅವರು ಇಂದು ಬೆಂಗಳೂರಿನ ಕೇಶವ ಶಿಲ್ಪದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, ಕರ್ನಾಟಕ ಉಡುಪಿಯ ಪೇಜಾವರ ಮಠದ ಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ವಿಶ್ವಸ್ಥರಲ್ಲಿ ಒಬ್ಬರಾಗಿರುವುದು ಗೌರವದ ವಿಚಾರ. ರಾಜ್ಯದಲ್ಲಿ 27,500 ಹಳ್ಳಿಗಳನ್ನು, ಸುಮಾರು 90 ಲಕ್ಷ ರಾಮಭಕ್ತರನ್ನು ತಲುಪುವ, ಹಾಗೂ ರಾಮಮಂದಿರಕ್ಕೆ ಧನ ಸಂಗ್ರಹಿಸುವ ಯೋಜನೆಯನ್ನು ವಿಹಿಂಪ ಹಾಕಿಕೊಂಡಿದೆ. ರಾಷ್ಟ್ರಮಟ್ಟದಲ್ಲಿ 4 ಲಕ್ಷ ಹಳ್ಳಿಗಳನ್ನು ಹಾಗೂ 11 ಕೋಟಿ ಕುಟುಂಬಗಳಿಂದ ಧನ ಸಂಗ್ರಹ ಮಾಡುವುದಾಗಿ ತಿಳಿಸಿದರು.

    ಇದನ್ನೂ ಓದಿ:  ರಾಮಮಂದಿರ ಧರ್ಮ ಪುನರುತ್ಥಾನ ಸಂಕೇತ: ಪೇಜಾವರ ಶ್ರೀ

    ವಿಹಿಂಪ ಕಾರ್ಯಕರ್ತರು ಹಳ್ಳಿ ಹಳ್ಳಿಗೆ ಮನೆಮನೆಗೆ ತೆರಳಿ ಧನ ಸಂಗ್ರಹಕಾರ್ಯ ಆರಂಭಿಸಲಿದ್ದಾರೆ. 10 ರೂಪಾಯಿ, 100 ರೂಪಾಯಿ, 1000 ರೂಪಾಯಿಯ ಮುದ್ರಿತ ಕೂಪನ್ ಗಳ ಸಹಾಯದಿಂದ ಧನಸಂಗ್ರಹ ನಡೆಯಲಿದೆ. ಇನ್ನು 2000 ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತ ಅರ್ಪಿಸಿದ ಭಕ್ತರಿಗೆ ರಸೀದಿ ನೀಡಲಾಗುವುದು ಹಾಗೂ ಈ ಭಕ್ತರು ಭಾರತೀಯ ಆದಾಯ ತೆರಿಗೆ ಕಾಯ್ದೆಯ 80ಜಿ ಸೆಕ್ಷನ್ ಅಡಿಯಲ್ಲಿ ತೆರಿಗೆ ವಿನಾಯತಿಯ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ವಿವರಿಸಿದರು.

    ಇದನ್ನೂ ಓದಿ:  ಜ.15ರಿಂದ ರಾಮ ಮಂದಿರ ನಿರ್ಮಾಣಕ್ಕೆ ಧನ ಸಂಗ್ರಹ

    ಈ ಅಭಿಯಾನ ಹಾಗೂ ಮಂದಿರ ನಿರ್ಮಾಣ ಕೇವಲ ಮತ್ತೊಂದು ಮಂದಿರದ ನಿರ್ಮಾಣದಂತೆ ಅಲ್ಲ. ಇದು ಜಾಗೃತ ಹಿಂದೂಶಕ್ತಿಯ ಪುನರುತ್ಥಾನದ ಸಂಕೇತವಾಗಿದೆ. ಸಮಾಜವನ್ನು ಮೇಲು ಕೀಳು ಎಂಬ ಭಾವನೆಗಳಿಂದ ಮುಕ್ತಗೊಳಿಸುವ, ಬಡತನ, ಆರೋಗ್ಯ, ಶಿಕ್ಷಣ, ಕೌಶಲ್ಯದ ನ್ಯೂನತೆಗಳನ್ನು ನಿರ್ಮೂಲನೆ ಮಾಡುವ, ಮಹಿಳೆಯರ ಘನತೆಯನ್ನು ಮರುಸ್ಥಾಪಿಸುವ, ಭಯೋತ್ಪಾದನೆಯ ಉಪದ್ರವವನ್ನು ನಿರ್ಮೂಲನೆ ಮಾಡುವ ವೇದದ ಗುರಿಯಾದ ‘ಸರ್ವೇ ಭವಂತು ಸುಖಿನಃ’ (ಎಲ್ಲರೂ ಸಂತೋಷವಾಗಿರಲಿ, ಎಲ್ಲರೂ ಆರೋಗ್ಯವಾಗಿರಲಿ, ಯಾರೂ ದುಃಖದಿಂದ ಬಳಲದಿರಲಿ) ಎಂಬ ಉದ್ದೇಶದಿಂದ ಕೂಡಿದೆ.

    ಇದನ್ನೂ ಓದಿ:  ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಕಾರ್ಯಾಲಯ ಉದ್ಘಾಟನೆ

    ನಿಧಿ ಸಮರ್ಪಣೆ ಹೀಗಿರಲಿದೆ : ವಿಹಿಂಪದ 5 ಕಾರ್ಯಕರ್ತರನ್ನು ಒಳಗೊಂಡ ತಂಡ ಈ ನಿಧಿ ಸಮರ್ಪಣಾ ಅಭಿಯಾನದಲ್ಲಿರುತ್ತದೆ. ಸಂಗ್ರಹವಾದ ಅಷ್ಟೂ ಹಣವನ್ನು 48 ಗಂಟೆಗಳೊಳಗೆ ತೀರ್ಥಕ್ಷೇತ್ರ ಟ್ರಸ್ಟ್ ನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ತನ್ನ ತಂಡದಲ್ಲಿ ಸಂಗ್ರಹವಾದ ಹಣವನ್ನು ಜಮೆ ಮಾಡುವ ಪ್ರತಿ ಕಾರ್ಯಕರ್ತರಿಗೆ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಬ್ಯಾಂಕ್ ಆಫ್ ಬರೋಡಾ ಅಥವಾ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನೋಂದಣಿ ಸಂಖ್ಯೆ ನೀಡಲಾಗಿರುತ್ತದೆ. ಹಣ ಸಂಗ್ರಹಣೆ, ಖಾತೆಗೆ ಪಾವತಿಸುವಲ್ಲಿ ವ್ಯವಸ್ಥೆಯು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಎಂದು ಅಲೋಕ್​ ಕುಮಾರ್​ ಸ್ಪಷ್ಟಪಡಿಸಿದರು.

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಗ್ರಾಮಾಯಣ: ಪ್ರಗತಿಯಲ್ಲಿದೆ ಮೊದಲ ಹಂತದ ಮತದಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts