Ram Temple chief priest : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ.
ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ನರವಿಜ್ಞಾನ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರ ಚಿಕಿತ್ಸೆ ನಡೆಯಿತು. ಅವರ ನರವೈಜ್ಞಾನಿಕ ಪರೀಕ್ಷೆಗಳನ್ನು ಮಾಡಲಾಯಿತು. ಅವರ ಸ್ಥಿತಿ ಗಂಭೀರವಾಗಿತ್ತು. ಆಚಾರ್ಯ ಸತ್ಯೇಂದ್ರ ಅವರು ತಿನ್ನುವುದನ್ನು ನಿಲ್ಲಿಸಿದ್ದರಿಂದ ತುಂಬಾ ದುರ್ಬಲರಾಗಿದ್ದರು. ಹಲವು ದಿನಗಳ ಚಿಕಿತ್ಸೆ ಬಳಿಕ ಅವರನ್ನು ಮತ್ತೆ ಅಯೋಧ್ಯೆಗೆ ಕರೆದೊಯ್ಯಲಾಗಿತ್ತು.
1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ಸತ್ಯೇಂದ್ರ ದಾಸ್ ಅವರು ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.