More

    ಸಿದ್ದರಾಮಯ್ಯರ ಹುಟ್ಟೂರಲ್ಲಿ ರಾಮ ಮಂದಿರ ನಿರ್ಮಾಣ! ಈ ಬಗ್ಗೆ ಮಾಹಿತಿ ಹೊರಹಾಕಿದ ಮಾಜಿ ಸಿಎಂ

    ಬೆಂಗಳೂರು: ವಿವಾದಿತ ಜಮೀನಿನಲ್ಲಿ ನಿರ್ಮಾಣ ಅಗುತ್ತಿರುವ ರಾಮ ಮಂದಿರಕ್ಕೆ ನಾನು ದುಡ್ಡು ಕೊಡಲ್ಲ. ಅಯೋಧ್ಯೆಯಲ್ಲಿನ ವಿವಾದಿತ ಜಾಗ ಬಿಟ್ಟು ಬೇರೆ ಬೇರೆ ಎಲ್ಲಿಯಾದರೂ ನಿರ್ಮಾಣ ಮಾಡುವುದಿದ್ದರೆ ದೇಣಿಗೆ ಕೊಡುತ್ತೇನೆ ಎಂದು ಇತ್ತೀಚಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ನಾನು ದುಡ್ಡು ಕೊಡಲಿ ಬಿಡಲಿ. ನಾನು ಈ ದೇಶದ ಪ್ರಜೆ. ಜನರು ರಾಮಮಂದಿರಕ್ಕೆ ಹಣ ನೀಡುತ್ತಿದ್ದಾರೆ, ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ ಎಂದಿದ್ದಾರೆ.

    ಮೈಸೂರಿನಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆಯೂ ಜನ ರಾಮ ಮಂದಿರ ಕಟ್ಟುತ್ತಾರೆ ಅದರಲ್ಲೇನಿದೆ? ನಾನು ನನ್ನ ಹುಟ್ಟೂರಿನಲ್ಲೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

    ನನ್ನ ಹುಟ್ಟೂರಿನಲ್ಲಿ ನಾನು ಕಟ್ಟಿಸುತ್ತಿರುವ ರಾಮ ಮಂದಿರಕ್ಕೆ ಜನರು ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ. ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

    ಜನರು ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಹಣ ನೀಡುತ್ತಿದ್ದಾರೆಯೇ ಹೊರತು ಅದು ಬಿಜೆಪಿಗಾಗಿ ಅಲ್ಲ. ಈ ಬಗ್ಗೆ ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ. ಕೇಳುವುದು ನಮ್ಮ ಹಕ್ಕು. ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗ ಆಗುತ್ತಿದೆ ಎಂದು. ಈ ಹಿಂದೆಯೂ ಅವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನೆಂದು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

    ವಿವಾದಿತ ಭೂಮಿಯ ರಾಮ ಮಂದಿರಕ್ಕೆ ದುಡ್ಡು ಕೊಡಲ್ಲ: ಸಿದ್ದರಾಮಯ್ಯ

    3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

    ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts