ವಿದ್ಯಾರ್ಥಿಗಳು ಅಧ್ಯಯನಶೀಲರಾದರೆ ಸದೃಢ ಭವಿಷ್ಯ: ಪೇಜಾವರ ಶ್ರೀ ಆಶೀರ್ವಚನ

New Project (5)
Published on

ಕಡಬ: ಕಲ್ಲಿನ ಪ್ರತಿಮೆಯಂತಿದ್ದ ವಿದ್ಯಾರ್ಥಿಗಳು ಅಧ್ಯಾಪಕರ ಶ್ರಮದಿಂದ ದೇವತೆಗಳಾಗಿ ರೂಪುಗೊಂಡಿದ್ದಾರೆ. ಮುಂದೆ ವಿದ್ಯಾರ್ಥಿಗಳು ಮತ್ತಷ್ಟು ಅಧ್ಯಯನಶೀಲರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ವಿಶ್ವೇಶ ಸೌಧ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಬೆಂಜನಪದವು ಕರಾವಳಿ ಕಲರ್ ಕಾರ್ಟನ್ಸ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಕೆ.ಪಿ.ಶೆಟ್ಟಿ, ಉದ್ಯಮಿಗಳಾದ ಕೇಶವ ಅಮೈ, ಎಂ.ಗಣಪತಿ ಪೈ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ನಾರಾಯಣ ಭಟ್ ಟಿ., ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸದಸ್ಯ ಬಾಲಚಂದ್ರ ಮುಚ್ಚಿಂತ್ತಾಯ, ಶ್ರೀ ರಾಮಕುಂಜೇಶ್ವರ ವಿದ್ಯಾಲಯ ಸಂಚಾಲಕ ಶಿವಪ್ರಸಾದ್ ಇಜ್ಜಾವು, ಪ್ರಾಂಶುಪಾಲ ಪ್ರವೀದ್, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ-ರಕ್ಷಕ ಸಂ ಅಧ್ಯಕ್ಷ ಹರೀಶ್ ಬಾರಿಂಜ, ಆಡಳಿತಾಧಿಕಾರಿ ಆನಂದ್ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಆರ್., ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಪ್ರಾಥಮಿಕ ಶಾಲಾ ವಿಭಾಗ ಮುಖ್ಯಶಿಕ್ಷಕಿ ಲೋಹಿತ ಎ. ಮೊದಲಾದವರಿದ್ದರು. ಕಾರ್ಯದರ್ಶಿ ಕೆ.ಸೇಸಪ್ಪ ರೈ ಸ್ವಾಗತಿಸಿದರು. ಸಹಶಿಕ್ಷಕರಾದ ಕಿಶೋರ್ ಕುಮಾರ್ ಬಿ., ಹರೀಶ್ ಆಚಾರ್ಯ ನಿರೂಪಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net