ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನೀರಿನ ಬಿಲ್ ಏರಿಕೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೊಟ್ಟಿದ್ದ ಶಾಕ್ಗೆ ಜನ ಸುಧಾರಿಸಿಕೊಳ್ಳುವ ಮೊದಲೇ ಇದೀಗ ಸಾರಿಗೆ ಸಚಿವರು ಟಿಕೆಟ್ ದರ ಹೆಚ್ಚಳದ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಮತ್ತೊಂದು ಸುತ್ತಿನ ಶಾಕ್ ನೀಡಿದೆ.

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (KTRC) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ವಿಜಯವಾಣಿಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿಯನ್ನು ಉ್ಲಲೇಖಿಸಿ ಬಿಜೆಪಿ ಶಾಸಕರಾದ ಆರ್.ಅಶೋಕ್ ಹಾಗೂ ವಿಜಯೇಂದ್ರ ಟ್ವೀಟ್ ಮಾಡಿದ್ದರು. ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಬಸ್ ದರ ಏರಿಕೆಗೆ ಹೊಸ ಆಯೋಗ, ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದರು. ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ. ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.
ಶ್ರೀ ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು , ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ.
— Ramalinga Reddy (@RLR_BTM) August 24, 2024
* 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ?
* 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ… https://t.co/PzcW2OhqFP
ಏನು ಹೇಳಲು ಹೊರಟ್ಟಿದ್ದೀರಾ?
ಇದಕ್ಕೆ ಪ್ರತಿಕ್ರಿಯಿಸಿರವ ರಾಮಲಿಂಗಾರೆಡ್ಡಿ, ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ? 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ?ಆಗ ಯಾಕೆ ವಿರೋಧ ವ್ಯಕ್ತಪಡಿಸಲಿಲ್ಲ. ದಿನಾಂಕ: 15/11/2021 ರಲ್ಲಿ ಎಂ.ಆರ್ ಶ್ರೀನಿವಾಸಮೂರ್ತಿ ಭಾಆಸೇ (ನಿವೃತ್ತ) ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿಜೆಪಿ ಸರ್ಕಾರ ರಚಿಸಿತ್ತು.
ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ಎಂದು ಕಿಡಿಕಾರಿದ್ದಾರೆ.
ಇತ್ತ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ವಿಜಯೇಂದ್ರ ಹೇಳಿಕೆಗೂ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆಗಳಿಗೂ ತಿರುಗೇಟು ನೀಡಿರುವ ರಾಮಲಿಂಗಾ ರೆಡ್ಡಿ, ಸಾರಿಗೆ ಸಂಸ್ಥೆಗಳನ್ನು ದಿವಾಳಿ ಮಾಡಿ ಹೊರಟ್ಟಿದ್ದ ಬಿಜೆಪಿಯ ಅಂದಿನ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವಧಿಯಲ್ಲಿನ ಕರ್ಮಕಾಂಡಗಳನ್ನು ಪಟ್ಟಿ ಮಾಡಿ ಮತ್ತೊಮೆ ಮಗದೊಮ್ಮೆ ತಿಳಿಸಿ ಹೇಳಿ ಎಂದು ತಿರುಗೇಟು ನೀಡಿದ್ದಾರೆ.
ಸಾರಿಗೆ ಸಂಸ್ಥೆಗಳನ್ನು ದಿವಾಳಿ ಮಾಡಿ ಹೊರಟ್ಟಿದ್ದ ಬಿ.ಜೆ.ಪಿಯ ಅಂದಿನ ಮುಖ್ಯಮಂತ್ರಿಗಳಾದ ಶ್ರೀ @BSYBJP ಮತ್ತು ಶ್ರೀ @BSBommai ರವರ ಅವಧಿಯಲ್ಲಿನ ಕರ್ಮಕಾಂಡಗಳನ್ನು ಪಟ್ಟಿ ಮಾಡಿ ಮತ್ತೊಮೆ ಮಗದೊಮ್ಮೆ ತಿಳಿಸಿ ಹೇಳಿ ಎಂದು ಟ್ಟೀಟ್ ಮೇಲೆ ಟ್ಟೀಟ್ ಮಾಡಿ ಕೋರುತ್ತಿರುವ ಬಿ.ಜೆ.ಪಿ ಪಕ್ಷದ ರಾಜ್ಯಾಧ್ಯಕ್ಷ @BYVijayendra ಅವರ ಗಮನಕ್ಕೆ..… https://t.co/VqhEv8ChyT
— Ramalinga Reddy (@RLR_BTM) August 23, 2024