More

    ರಾಜ್ಯದಲ್ಲಿ ಈ ಬಾರಿ ಬಿಜೆಪಿ ಒಂದಂಕಿ ದಾಟುವುದು ಡೌಟ್​: ರಾಮಲಿಂಗಾರೆಡ್ಡಿ

    ಬೀದರ್: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳದಿವೆ. ಇನ್ನು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಒಂದಂಕಿ ದಾಟುವುದಿಲ್ಲ ಎಂದು ಹೇಳಿದ್ದಾರೆ.

    ಬೀದರ್​ನಲ್ಲಿ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, ಈ ಬಾರಿ ಕಾಂಗ್ರೆಸ್​ ಪಕ್ಷವು ಯುವಕರು ಹಾಗೂ ಮಹಿಳಯರಿಗೆ ಟಿಕೆಟ್​ ಕೊಟ್ಟಿದ್ದೇವೆ. ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಒಂದಂಕಿ ದಾಟುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

    ಈ ಹಿಂದೆ ಬಿಜೆಪಿಯವರು ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲಲ್ಲಿದ್ದೇವೆ ಎಂದು ಹೇಳುತ್ತಿದ್ದರು. ಗೃಹಸಚಿವ ಅಮಿತ್ ಶಾ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇದೇ ಮಾತು ಎಲ್ಲ ಕಡೆ ಹೇಳುತ್ತಿದ್ದರು‌. ಈಗ ಎಂಟು ಸ್ಥಾನಗಳಲ್ಲಿಯೂ ಅವರಿಗೆ ಭರವಸೆ ಉಳಿದಿಲ್ಲ‌.

    Ramalinga Reddy

    ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

    ಕಳೆದ ಹನ್ನೊಂದು ತಿಂಗಳಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆ ಸಂದರ್ಭದಲ್ಲಷ್ಟೇ ರಾಜ್ಯಕ್ಕೆ ಬರುತ್ತಾರೆ. ಏಳು ತಿಂಗಳಾದರೂ ಬರ ಪರಿಹಾರ ಕೊಟ್ಟಿರಲಿಲ್ಲ. ಬರಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿರಲಿಲ್ಲ‌‌. 26 ಜನ ರಾಜ್ಯದ ಬಿಜೆಪಿ ಸಂಸದರು ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮಾತ್ರ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದರು.

    ನಮ್ಮ ನೆಲ, ಜಲ, ಭಾಷೆಗೆ ಧಕ್ಕೆಯಾದರೆ ರಾಜ್ಯದ ಸಂಸದರು ಅದರ ಬಗ್ಗೆ ಮಾತಾಡಬೇಕು. ಆದರೆ, ಬಿಜೆಪಿ ಒಬ್ಬ ಸಂಸದರೂ ಮಾತಾಡಿಲ್ಲ. ಈ ಸಲ ಇವರೆಲ್ಲರೂ ಮನೆಗೆ ಹೋಗುವರು. ಹೊಸ ಸಂಸದರು ಸಂಸತ್ತಿಗೆ ಪ್ರವೇಶಿಸುವರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಬಸ್ ಖರೀದಿಸಿರಲಿಲ್ಲ. ನಮ್ಮ ಸರ್ಕಾರ ಬಂದ ನಂತರ ಒಟ್ಟು 5,800 ಬಸ್ ಗಳ ಖರೀದಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ಮೂರು ಸಾವಿರ ಬಸ್ ಗಳು ಬಂದಿವೆ. ಮಿಕ್ಕುಳಿದವು ಇಷ್ಟರಲ್ಲೇ ಬರಲಿವೆ. ಪ್ರತಿ ವರ್ಷ ಹತ್ತು ಸಾವಿರ ನೌಕರರು ಇಲಾಖೆಯಲ್ಲಿ ನಿವೃತ್ತರಾಗುತ್ತಾರೆ. ಕಾಲಕಾಲಕ್ಕೆ ನೇಮಕಾತಿ ಮಾಡಬೇಕು. ಬಿಜೆಪಿ ಈ ಕೆಲಸ ಮಾಡಿರಲಿಲ್ಲ‌. ಈಗ ಪುನಃ ಖಾಲಿ‌ ಹುದ್ದೆಗಳನ್ನು ತುಂಬಲಾಗುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts