More

    ಮನೆ ನಿರ್ಮಾಣಕ್ಕೆ ಸಹಾಯಧನ : ಅಲೆಮಾರಿ, ಅರೆ ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರಶೆಟ್ಟಿ ಮಾಹಿತಿ ಮುಖ್ಯಸ್ಥರೊಂದಿಗೆ ಸಭೆ

    ರಾಮನಗರ : ಅಲೆಮಾರಿ ಹಾಗೂ ಅರೆ ಅಲೆಮಾರಿಗಳಲ್ಲಿ 46 ಜನಾಂಗದವರಿದ್ದು, ಇವರು ಆರ್ಥಿಕ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡು ಸ್ಥಿರವಾಗಿ ಒಂದು ಕಡೆ ನೆಲಸುವಂತೆ ಮಾಡಲು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ನಿಗಮದ
    ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ತಿಳಿಸಿದರು.

    ರಾಮನಗರ ಪ್ರವಾಸಿ ಮಂದಿರದಲ್ಲಿ ಬುಧವಾರ ಅಲೆಮಾರಿ ಜನಾಂಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದರು. ಮಾಗಡಿ, ರಾಮನಗರ ತಾಲೂಕಿನಲ್ಲಿ ಅಲೆಮಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಿಗಮದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು 50 ಸಾವಿರ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮನೆಗಳ ನಿರ್ಮಾಣಕ್ಕಾಗಿ ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೆೇಕು ಎಂದು ಸಲಹೆ ನೀಡಿದರು.

    ನಿಗಮವು ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸಹಾಯಧನ ಸೌಲಭ್ಯ, ಕಿರುಸಾಲ ಯೋಜನೆಯಲ್ಲಿ ಮಹಿಳೆಯರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳಿಗೆ ಸ್ವ ಸಹಾಯ ಗುಂಪುಗಳ ಮೂಲಕ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಹಾಗೂ ಸಹಾಯಧನ ಒದಗಿಸುತ್ತದೆ. ವೃತ್ತಿಪರ ಕೋರ್ಸ್ಗಳಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುವವರಿಗೆ ಗಂಗಾ ಕಲ್ಯಾಣ ಯೋಜನೆ, ಭೂಖರೀದಿ ಯೋಜನೆ, ಬ್ಯಾಂಕ್ ಗಳ ಸಹಯೋಗದೊಂದಿಗೆ ಸಾಲ ಸೌಲಭ್ಯ ಒದಗಿಸಲಾಗುವುದು ಎಂದರು.

    ಪ್ರತಿ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಅಲೆಮಾರಿಗಳ ಸ್ಥಿತಿಗತಿ, ಸಮಸ್ಯೆಗಳಲ್ಲಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಜನಾಂಗದ 5 ರಿಂದ 10 ನೇ ತರಗತಿಯ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 2000 ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು , ಇಲ್ಲಿಯವರೆಗೆ ಸುಮಾರು 720 ವಿದ್ಯಾರ್ಥಿಗಳಿಗೆ 14 ಲಕ್ಷದ 40 ಸಾವಿರ ರೂಪಾಯಿ ನೀಡಲಾಗಿದೆ ಎಂದರು.ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಆದ್ಯತೆ ನೀಡಬೇಕು.

    ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ
    ಬರಬೇಕು. ಪ್ರತಿ ಹಂತದಲ್ಲಿ ಸರ್ಕಾರ ಸವಲತ್ತುಗಳನ್ನು ಒದಗಿಸುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಸಭೆಯಲ್ಲಿ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದ ಅಧಿಕಾರಿ ಪ್ರಕಾಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts