

ರಾಮನಗರ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಜಾಲಮಂಗಲದ ಲಕ್ಷ್ಮೀ ನಾರಾಯಣಸ್ವಾಮಿ ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದರು.
ಶುಕ್ರವಾರ ಕುಟುಂಬ ಸಮೇತ ದೇಗುಲಕ್ಕೆ ಬಂದ ಎಚ್ಡಿಕೆ, 101 ರೂಪಾಯಿಯನ್ನು ತಪ್ಪು ಕಾಣಿಕೆಯಾಗಿ ದೇವರಿಗೆ ಸಮರ್ಪಿಸಿದರು. ಬಳಿಕ ಲಕ್ಷ್ಮೀನಾರಾಯಣಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
5 ವರ್ಷ ಸಂಪೂರ್ಣವಾಗಿ ಅಧಿಕಾರ ನಡೆಸಲು ಸಾಧ್ಯವಾಗದಿರಲು ದೇವರ ಶಾಪವೇ ಕಾರಣ ಎಂದು ತಪ್ಪು ಕಾಣಿಕೆ ಸಲ್ಲಿಕೆ ಸಲ್ಲಿಸಲಾಗಿದೆ. ಇದನ್ನೂ ಓದಿರಿ ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್ಆ್ಯಪ್ ಸ್ಟೇಟಸ್
2004ರ ಚುನಾವಣೆ ವೇಳೆ ದೇವರ ಮುಂದೆ ತಮಗೆ ಯಾವುದೇ ಅಧಿಕಾರ ಬೇಡ ಎಂದಿದ್ದರು. ಆದರೆ, ಅನಿವಾರ್ಯವಾಗಿ ಬಂದೊದಗಿದ ಅವಕಾಶದಲ್ಲಿ ಸಿಎಂ ಆಗಿದ್ದರು. ದೇವರ ಮುಂದೆ ಹೇಳಿದಂತೆ ನಡೆಯದಿದ್ದಕ್ಕೆ ತಮಗೆ ಸಂಪೂರ್ಣ ಅಧಿಕಾರ ನಡೆಸಲು ಆಗಲಿಲ್ಲ. ಈ ಕಾರಣಕ್ಕೆ ದೇವರಿಗೆ ಎಚ್ಡಿಕೆ ತಪ್ಪೊಪ್ಪಿಗೆ ಕಾಣಿಕೆ ನೀಡಿದ್ದಾರೆ.
ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಅವರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮಾಗಡಿ ಶಾಸಕ ಮಂಜುನಾಥ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.