More

    ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಹುಚ್ಚು ಕ್ರಿಮಿ ವಿರುದ್ಧ ಕಠಿಣ ಶಿಕ್ಷೆಗೆ ಕ್ರಮ: ಸಚಿವ ಹಾಲಪ್ಪ ಆಚಾರ್

    ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ಎರಚಿದ ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಹುಚ್ಚು ಕ್ರಿಮಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಖಡಕ್ ಆಗಿ ಹೇಳಿದರು.

    ರಾಸಾಯನಿಕ [ಆಸಿಡ್] ದಾಳಿಗೊಳಗಾದ ಕನಕಪುರದ ಅಪ್ರಾಪ್ತ ವಯಸ್ಸಿನ ಯುವತಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂತ್ರಸ್ತೆಯನ್ನು ಭೇಟಿ ಮಾಡಿದ ಹಾಲಪ್ಪ ಆಚಾರ್ ಧೈರ್ಯ ತುಂಬಿದರು.

    ಆಘಾತಕ್ಕೊಳಗಾಗಿರುವ ಯುವತಿ ಹಾಗೂ ಆಕೆಯ ತಾಯಿಗೆ ಸಾಂತ್ವನ ಹೇಳಿದ ಅವರು, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಪ್ರಯತ್ನಿಸುತ್ತದೆ. ಆದಷ್ಟು ಬೇಗ ಚೇತರಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಧೈರ್ಯ ಹೇಳಿದರು.

    ನಂತರ ಹಾಲಪ್ಪ ಆಚಾರ್ ಸುದ್ದಿಗಾರರ ಜೊತೆ ಮಾತನಾಡಿ, ಕನಕಪುರ ಪಟ್ಟಣದಲ್ಲಿ ಅಪ್ರಾಪ್ತ ಯುವತಿಯ ಮೇಲೆ ರಾಸಾಯನಿಕ ದಾಳಿ ನಡೆದಿದ್ದು, ಆಕೆಯ ಬೆನ್ನು, ಭುಜ, ಕಣ್ಣಿಗೆ ಹಾನಿಯಾಗಿದೆ. ಇಂತಹವರ ಮೇಲೆ ಸರ್ಕಾರ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ಕನಕಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಈಗಾಗಲೇ ಚರ್ಚಿಸಿ, ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

    ಹುಚ್ಚು ಕ್ರಿಮಿಗಳು ಇಂತಹ ದುಷ್ಕೃತ್ಯ ಎಸಗಿದ್ದು, ಇಂತಹ ಘಟನೆಗಳು ಮರುಕಳಿಸಬಾರದು. ಘಟನೆ ಬಗ್ಗೆ ಇಂದು ಬೆಳಿಗ್ಗೆ ತಮಗೆ ಮಾಹಿತಿ ತಿಳಿಯುತ್ತಿದ್ದಂತೆ ಎಲ್ಲಾ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸರ್ಕಾರದ ಪರವಾಗಿ ಸಾಂತ್ವಾನ ಹೇಳಿದ್ದೇನೆ. ಯುವತಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕಾರ್ನಿಯಾ ತಜ್ಞರು ಪರಿಶೀಲಿಸಲಿದ್ದಾರೆ. ತಜ್ಞ ವೈದ್ಯರ ಚಿಕಿತ್ಸೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ನೆರವಾಗಲಿದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.

    ಆರ್​ಸಿಬಿ ತಂಡದ ಮೊದಲ ಮಹಿಳಾ ನಾಯಕಿಯಾಗಿ ಸ್ಮೃತಿ ಮಂದನಾ ಆಯ್ಕೆ: ಶುಭಕೋರಿದ ವಿರಾಟ್​, ಡುಪ್ಲೆಸಿಸ್​

    ತೆರಿಗೆ ಕಟ್ಟದೆ ಕಳ್ಳಾಟ ಆಡುತ್ತಿದ್ದ ಮಂತ್ರಿ ಮಾಲ್​ಗೆ ಬಿಬಿಎಂಪಿ ಶಾಕ್​: ಚರಾಸ್ತಿ ಮುಟ್ಟುಗೋಲು

    ಕುರ್ಚಿ ಆಸೆ ಇನ್ನೂ ಬಂದಿಲ್ಲ; ಪ್ರಧಾನಿ ಮೋದಿ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts