More

    ಮನೆಯ ಬಾಗಿಲಿಗೆ ಸರ್ಕಾರಿ ಅಧಿಕಾರಿಗಳು ಮಧ್ಯವರ್ತಿಗಳ ಹಾವಳಿ ತಡೆಯಲು ಕಂದಾಯ ಅದಾಲತ್ ಕಾರ್ಯಕ್ರಮ

    ಕೈಲಾಂಚ
    ಕಂದಾಯ ಅದಾಲತ್ ಕಾರ್ಯಕ್ರಮ ಜನರಿಗೆ ತುಂಬಾ ಉಪಯುಕ್ತವಾಗಿದ್ದು, ಮನೆ ಬಾಗಿಲಿಗೆ ಬಂದಿರುವ ಸದಾವಕಾಶವನ್ನು ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ಬನ್ನಿಕುಪ್ಪೆ ಗ್ರಾಪಂ ಅಧ್ಯಕ್ಷೆ ಶೋಭಾ ತಿಳಿಸಿದರು.

    ಹೋಬಳಿಯ ಬನ್ನಿಕುಪ್ಪೆ ಗ್ರಾಪಂ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ, ತಾಪಂ, ಗ್ರಾಪಂ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿ, ವರ್ಷ, ತಿಂಗಳುಗಟ್ಟಲೆ ಕೆಲಸ ಬಿಟ್ಟು ತಾಲೂಕು ಕಚೇರಿ, ನಾಡ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಅಲ್ಲದೆ, ಮಧ್ಯವರ್ತಿಗಳ ಹಾವಳಿ ತಡೆಯಲು ಜನರಿಗೆ ಅನುಕೂಲವಾಗುವಂತೆ ಮನೆಯ ಬಾಗಿಲಿಗೆ ಸರ್ಕಾರಿ ಅಧಿಕಾರಿಗಳು ಬಂದಿದ್ದಾರೆ.

    ಜಮೀನು ಖಾತೆ ಸಮಸ್ಯೆ, ಪಹಣಿಯಲ್ಲಿನ ದೋಷ, ಸಂಧ್ಯಾ ಸುರಕ್ಷೆ, ವಿಧವಾ ವೇತನ, ಅಂಗವಿಕಲ ವೇತನ ಜತೆಗೆ ಗ್ರಾಪಂ ಸೇವೆಗಳು ಸೆೇರಿ ಸರ್ಕಾರದ ವಿವಿಧ ಸೌಲಭ್ಯಗಳಲ್ಲಿ ಆಗಿರುವ ಲೋಪದೋಷ ಸರಿಪಡಿಸಲು ಮನೆಗಳ ಇ-ಖಾತೆ ಸಮಸ್ಯೆ ಬಗೆಹರಿಸಲು ಅವಕಾಶ ಒದಗಿ ಬಂದಿದೆ ಎಂದರು.

    ಸಾರ್ವಜನಿಕರು ಅಧಿಕಾರಿಗಳಿಗೆ ಸಂಬಂಧಪಟ್ಟ ದಾಖಲಾತಿ ನೀಡಿ, ಸಮಸ್ಯೆ ಬಗೆಹರಿಸಿಕೊಂಡು, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯಬೇಕು ಎಂದರು.

    ಉಪ ತಹಸೀಲ್ದಾರ್ ರುದ್ರಮ್ಮ ಮಾತನಾಡಿ, ಜನರಿಗೆ ಸರ್ಕಾರದ ಸವಲತ್ತುಗಳು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಗ್ರಾಪಂ ಮಟ್ಟದಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮುಖಾಂತರ ಅವರ ಸಮಸ್ಯೆ ಬಗೆಹರಿಸಲು, ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ತಾಲೂಕು ಆಡಳಿತ ಹೊರಟಿದೆ ಎಂದರು.
    ಸಹಾಯಕ ಕಾರ್ಯಪಾಲಕ ಅಭಿಯಂತರ ವೀರನಂಜೇಗೌಡ, ಜಿಪಂ ಅಭಿಯಂತರ ಲೋಕೇಶ್, ಗ್ರಾಮ ಲೆಕ್ಕಾಧಿಕಾರಿಗಳಾದ ಕುಮುದಾ, ಪುಷ್ಪಾ, ಮೋಹನ್, ಪ್ರಾಧಿಕಾರ ಮಾಜಿ ಸದಸ್ಯ ರಾಘವೇಂದ್ರ, ಗ್ರಾಪಂ ಮಾಜಿ ಸದಸ್ಯ ಶ್ರೀನಿವಾಸ್ ಇದ್ದರು.


    ಸಂಧ್ಯಾ ಸುರಕ್ಷೆ, ವಿಧವಾ ವೇತನ, ಅಂಗವಿಕಲ ವೇತನದಲ್ಲಿ ಉಂಟಾಗುತ್ತಿದ್ದ ಹಲವು ಸಮಸ್ಯೆಯನ್ನು ಬಗೆಹರಿಸಲಾಗಿದೆ. ಜತೆಗೆ ಪೌತಿ ಖಾತೆ, ಪಹಣಿಯಲ್ಲಿನ ಲೋಪದೋಷ ಸರಿಪಡಿಸಲಾಗುತ್ತಿದೆ. ಸಾರ್ವಜನಿಕರು ನೇರವಾಗಿ ಅಧಿಕಾರಿಗಳನ್ನು ಭೇಟಿ ಮಾಡಿ, ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇಲಾಖೆ ತಮ್ಮ ಜತೆಗಿದ್ದು, ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದೆ.
    ರುದ್ರಮ್ಮ, ಉಪ ತಹಸೀಲ್ದಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts