More

    ಕಾವೇರಿ ನೀರಾವರಿ ನಿಗಮದ ಕಚೇರಿ ಮೇಲೆ ಲೋಕಾದಾಳಿ

    ರಾಮನಗರ: ಕಾಮಗಾರಿಯಲ್ಲಿ ಅವ್ಯವಹಾರ ಆರೋಪದ ದೂರಿನ ಹಿನ್ನೆಲೆಯಲ್ಲಿ ನಗರದ ಕಾವೇರಿ ನೀರಾವರಿ ನಿಗಮದ ಮಂಚನಬೆಲೆ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

    ನಗರದ ಅರ್ಕಾವತಿ ಬಡಾವಣೆಯಲ್ಲಿರುವ ಕಚೇರಿ ಮೇಲೆ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆಸಿರುವ ತಂಡ, ಕಚೇರಿಯಲ್ಲಿರುವ ಕಡತಗಳ ಪರಿಶೀಲನೆ ನಡೆಸಿತು. ಕಚೇರಿ ಅಧಿಕಾರಿಗಳು ಹೊರಗೆ ಹೋಗದಂತೆ ದಿಗ್ಭಂಧನ ಹಾಕಿ, ಎಲ್ಲರ ಮೊಬೈಲ್ ಫೋನ್ ಗಳನ್ನು ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.

    ನಿಗಮದ ಕಾಮಗಾರಿಗಳಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರ್‌ಟಿಐ ಕಾರ್ಯಕರ್ತ ಶಂಕರ್ ಎನ್ನುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts