More

    ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಬಿಇಒ ಕುಮಾರಸ್ವಾಮಿ ಅಭಿಮತ

    ಕೈಲಾಂಚ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಕ್ರೀಡೆಗೂ ಉತ್ತೇಜನ ದೊರೆಯುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ.ಕುಮಾರಸ್ವಾಮಿ ತಿಳಿಸಿದರು.


    ಅವ್ವೇರಹಳ್ಳಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಗುರುವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದ ಸವಾರೋಪ ಸವಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುವಾನ ವಿತರಿಸಿ ವಾತನಾಡಿದರು.


    ಸರ್ಕಾರಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಜತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು ಮಕ್ಕಳು ಯಾವುದಾದರೊಂದು ಕ್ರೀಡೆಯಲ್ಲಿ ಆಸಕ್ತಿ ಹೊಂದಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಬೇಕೆಂದು ತಿಳಿಸಿದರು.


    ಹೊಂಬೆಳಕು ಸಂಸ್ಥೆ ಪೊಲೀಸ್ ಸುರೇಶ್ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಕಾರಿ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆಗಳು ನೆರವಾಗಿದ್ದು, ಭವಿಷ್ಯದ ದೃಷ್ಟಿಯಿಂದ ಮಕ್ಕಳು ಕ್ರೀಡೆಗಳಲ್ಲಿ ತೊಡಗುವಂತೆ ಶಿಕ್ಷಕರು ಮಾಡಬೇಕಾಗಿದೆ. ಸರ್ಕಾರವೂ ಕ್ರೀಡಾ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದು, ಸರ್ಕಾರಿ ಹುದ್ದೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಮೀಸಲಾತಿ ಕಲ್ಪಿಸಿದೆ. ಮಕ್ಕಳು ಈಗಿನಿಂದಲೇ ಕ್ರೀಡೆಯಲ್ಲೂ ಆಸಕ್ತಿ ಹೊಂದಿ ಎತ್ತರಕ್ಕೆ ಬೆಳೆಯಬೇಕೆಂದು ಕರೆ ನೀಡಿದರು.


    ಸವಾಜ ಸೇವಕ ತಮ್ಮಣ್ಣ ಮಾತನಾಡಿದರು. ಕೈಲಾಂಚ, ವಿಭೂತಿಕೆರೆ, ಹುಣಸನಹಳ್ಳಿ, ಅವ್ವೇರಹಳ್ಳಿ ಕ್ಲಸ್ಟರ್‌ನ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಓಟ, ತಟ್ಟೆ, ಗುಂಡು ಎಸೆತ, ಉದ್ದ ಜಿಗಿತ, ಎತ್ತರ ಜಿಗಿತ, ಕಬಡ್ಡಿ, ಖೋಖೋ, ರಿಲೇ, ವಾಲಿಬಾಲ್, ಬಾಲ್‌ಬ್ಯಾಡ್ಮಿಂಟನ್, ಷಟಲ್ ಬ್ಯಾಡ್ಮಿಂಟನ್‌ನಲ್ಲಿ ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುವಾನ ವಿತರಿಸಲಾಯಿತು.


    ಹುಲಿಕೆರೆ ಗುನ್ನೂರು ಗ್ರಾಪಂ ಅಧ್ಯಕ್ಷೆ ತೇಜಾ ಸತೀಶ್, ರಾಮನಗರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ಪ್ರಾಂಶುಪಾಲ ನಾಮ್‌ದರ್ ನರಸಿಂಹಲು ವಾತನಾಡಿದರು.


    ಗ್ರಾಪಂ ಸದಸ್ಯರಾದ ನಾಗೇಶ್, ಚಿಕ್ಕತಾಯಮ್ಮ, ವಿಎಸ್ಸೆಸ್ಸೆನ್ ಅಧ್ಯಕ್ಷ ವೆಂಕಟಪ್ಪ, ಉಪ ಪ್ರಾಂಶುಪಾಲೆ ಕೆ.ವಿ. ಪುಷ್ಪಲತಾ, ಹೊಂಬೆಳಕು ಸಂಸ್ಥೆ ಅಧ್ಯಕ್ಷ ಉಮೇಶ್, ದೈಹಿಕ ಶಿಕ್ಷಣ ಶಿಕ್ಷಕ ಸಂದ ಜಿಲ್ಲಾಧ್ಯಕ್ಷ ರೇಣುಕಯ್ಯ, ಶಿಕ್ಷಕರಾದ ಪ್ರೇಮಲತಾ, ವಿಜಯಕುಮಾರ್, ನೀಲಕಂಠಸ್ವಾಮಿ, ಮಹಾಲಿಂಗಯ್ಯ, ಬಸವೇಗೌಡ ನಾರಾಯಣಸ್ವಾಮಿ, ಮಂಜುಳಾ, ಪ್ರಮೀಳಾ, ಸೋಮಶೇಖರ್, ಗೋವಿಂದಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಸಂದ ತಾಲೂಕು ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಶಿವಲಿಂಗಯ್ಯ, ಭೈರಪ್ಪ ಮುಂತಾದವರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts