

ಕಾರ್ಕಳ: ಆದಿ ಕಾವ್ಯವಾಗಿ ರಾಮಾಯಣವು ಇಂದು ಭಾರತೀಯ ಸಂಸ್ಕೃತಿಯ ಆಗರವಾಗಿ ನಿಂತಿದೆ ಎಂದು ವಾಗ್ಮಿ ಡಾ.ರಾಘವೇಂದ್ರ ರಾವ್ ಪಡುಬಿದ್ರಿ ಹೇಳಿದರು.
ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಶನಿವಾರ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಮಾಲೆಯ ಮೊದಲ ಸೋಪಾನ ವಾಲ್ಮೀಕಿ ಗಿರಿಯಲ್ಲಿ ಜನಿಸಿ’ ವಿಷಯದ ಕುರಿತು ಉಪನ್ಯಾಸ ನೀಡಿದರು.
ಡಾ.ನಾ.ಮೊಗಸಾಲೆ ಅಧ್ಯಕ್ಷತೆ ವಹಿಸಿದ್ದರು. ಎಸ್.ನಿತ್ಯಾನಂದ ಪೈ ಉಪಸ್ಥಿತರಿದ್ದರು. ಸದಾನಂದ ನಾರಾವಿ ಸ್ವಾಗತಿಸಿದರು. ಪ್ರಾಂಜಲಿ ಪ್ರಾರ್ಥಿಸಿದರು. ಸುಧಾಕರ ಶ್ಯಾನುಭಾಗ್ ಪರಿಚಯಿಸಿದರು. ಸುಲೋಚನಾ ಬಿ.ವಿ ಕಾರ್ಯಕ್ರಮ ನಿರೂಪಿಸಿದರು. ಡಾ.ಸುಮತಿ ಪಿ. ವಂದಿಸಿದರು.