ಸಭೆ ನಡೆಸಿದ ಮಾತ್ರಕ್ಕೆ ಏನೂ ಆಗಲ್ಲ, ಉಮೇಶ್ ಕತ್ತಿ ಪಕ್ಷ ಬಿಡಲ್ಲ...

RAMESH JARKIHOLI-UMESH KATTI
Published on

ಮೈಸೂರು: ಶಾಸಕ ಉಮೇಶ್ ಕತ್ತಿ ಏನೇನೋ ಆಡ್ತಾನೆ, ಆದ್ರೆ ಪಕ್ಷ ಬಿಡೋದಿಲ್ಲ. ಆತ ನನ್ನ ಸ್ನೇಹಿತ. ಸಭೆ ಸೇರಿದ ಮಾತ್ರಕ್ಕೆ ಏನೋ ಆಗಿಬಿಡುವುದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಫಿ, ತಿಂಡಿಗೆ ಸೇರೋದೆಲ್ಲ ತಪ್ಪಲ್ಲ. ಉಮೇಶ್ ಕತ್ತಿ ನನ್ನ ಸ್ನೇಹಿತ. ಅವನು ಪಕ್ಷ ಬಿಡಲ್ಲ ಎಂದು ಹೇಳುವ ಮೂಲಕ ಭೋಜನಕೂಟ ನೆಪದಲ್ಲಿ ಗುರುವಾರ ರಾತ್ರಿ ನಡೆದಿದ್ದ 5 ಜಿಲ್ಲೆಯ ಬಿಜೆಪಿ ಶಾಸಕರ ಸಭೆ ವಿಚಾರಕ್ಕೆ ಸ್ಪಷ್ಟನೆ ನೀಡಿದರು.

ಕೊರೊನಾ ಲಾಕ್‍ಡೌನ್ ಕಾರಣದಿಂದ ಯಾರೂ ಪರಸ್ಪರ ಭೇಟಿಯಾಗಲು ಆಗಿರಲಿಲ್ಲ. ಬಹುದಿನಗಳ ನಂತರ ಎಲ್ಲರೂ ಕೂಡಿದ್ದಾರೆ. ಒಂದು ಕಡೆ ಕುಳಿತು ಊಟ ಮಾಡಿದ್ದಾರೆ. ಅದನ್ನೇ ಮಾಧ್ಯಮಗಳು ತಪ್ಪಾಗಿ ಅರ್ಥೈಸುತ್ತಿವೆ. ಸಭೆ ಸೇರಿದ ಮಾತ್ರಕ್ಕೆ ಏನೇನೋ ಆಗಿ ಬಿಡುವುದಿಲ್ಲ ಎಂದು ಗುಡುಗಿದರು. ಉಮೇಶ್ ಕತ್ತಿ ಪಕ್ಷ ಬಿಡುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net