ರಮೇಶ್​ ಜಾರಕಿಹೊಳಿ ಅವರು ಎಸ್​.ಎಂ. ಕೃಷ್ಣ ಅಭಿಮಾನಿ, ಅವರನ್ನು ಭೇಟಿಯಾಗಲು ಬಂದಿದ್ದಾರೆ ಅಷ್ಟೆ: ಬಿಎಸ್​ವೈ

ಬೆಂಗಳೂರು: ಒಂದೆಡೆ ಕಾಂಗ್ರೆಸ್​ ಶಾಸಕರನ್ನು ತಮ್ಮತ್ತ ಸೆಳೆದು ಬಿಜೆಪಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಪ್ರಯತ್ನ ನಡೆಸಿರುವಂತೆ, ಕಾಂಗ್ರೆಸ್​ ಶಾಸಕರಾದ ರಮೇಶ್​ ಜಾರಕಿಹೊಳಿ ಮತ್ತು ಡಾ. ಸುಧಾಕರ್​ ಅವರು ಭಾನುವಾರ ಎಸ್​.ಎಂ. ಕೃಷ್ಣ ಅವರ ಮನೆಯಲ್ಲಿ ಕಾಣಿಸಿಕೊಂಡರು.

ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಮತ್ತು ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಷ್​ ಅವರು ಎಸ್​.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು.

ಎಸ್​.ಎಂ. ಕೃಷ್ಣ ಅವರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ರಮೇಶ್​ ಜಾರಕಿಹೊಳಿ ಮತ್ತು ಡಾ. ಸುಧಾಕರ್​ ಅವರು ಎಸ್​.ಎಂ. ಕೃಷ್ಣ ಅವರ ಅಭಿಮಾನಿಗಳು. ಹಾಗಾಗಿ ಅವರನ್ನು ಭೇಟಿಯಾಗಲು ಬಂದಿದ್ದಾರೆ. ಇದೇ ಸಂದರ್ಭದಲ್ಲಿ ನಾವು ಬಂದಿದ್ದು ಕಾಕತಾಳೀಯ. ಇದರಲ್ಲಿ ಯಾವುದೇ ತಂತ್ರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *