ಕುತೂಹಲ ಕೆರಳಿಸಿದ ರಮೇಶ್ ಜಾರಕಿಹೊಳಿ-ದೇವೇಂದ್ರ ಫಡ್ನವೀಸ್ ತುರ್ತು ಭೇಟಿ; ತಿಂಗಳಲ್ಲಿದು 2ನೇ ಬಾರಿ !

Ramesh Jarakiholi
Published on

ಚಿಕ್ಕೋಡಿ: ಸಚಿವ ರಮೇಶ್ ಜಾರಕಿಹೊಳಿಯವರು ಇಂದು ಮತ್ತೊಮ್ಮೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರನ್ನು ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಮೇಶ್​ ಜಾರಕಿಹೊಳಿ ಇದೇ ತಿಂಗಳಲ್ಲಿ ಈ ಹಿಂದೆಯೂ ಒಮ್ಮೆ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದರು. ಆದರೆ ಈ ಬಾರಿ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿ ಮಾಜಿ ಸಿಎಂ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇವೇಂದ್ರ ಫಡ್ನವೀಸ್ ಹಾಗೂ ರಮೇಶ್ ಜಾರಕಿಹೊಳಿ ಸುಮಾರು 1 ಗಂಟೆ ಕಾಲ ಚರ್ಚೆ ನಡೆದಿದೆ.

ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ, 2019ರ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿತ್ತು. ಆದರೆ, ನಾವು ಮೋಸಹೋದೆವು. ಶೀಘ್ರವೇ ಮಹಾರಾಷ್ಟ್ರದಲ್ಲಿ ಬಿಜೆಪಿಯದ್ದೇ ಸರ್ಕಾರ ಬರಲಿದೆ ಎಂದು ಹೇಳುವ ಮೂಲಕ ಮತ್ತೆ ಚುನಾವಣೆ ನಡೆಯಲಿದೆಯಾ? ಎಂಬ ಅನುಮಾನವನ್ನು ಹುಟ್ಟು ಹಾಕಿದ್ದರು.

ಇದೀಗ ರಮೇಶ್ ಜಾರಕಿಹೊಳಿ ಮತ್ತು ದೇವೇಂದ್ರ ಫಡ್ನವೀಸ್ ಪದೇಪದೆ ಭೇಟಿ ಮಾಡುತ್ತಿರುವುದರ ಹಿಂದಿನ ಮರ್ಮ ಏನು ಎಂಬ ಕುತೂಹಲ ಶುರುವಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net