

ಬೆಂಗಳೂರು: ರಾಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣವನ್ನು ಇನ್ನೆರಡು ದಿನದಲ್ಲಿ ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಬಗ್ಗೆ ಇಂದು ಸಿಎಂ ಜತೆ ಗೃಹ ಸಚಿವರು ಸಮಾಲೋಚನೆ ನಡೆಸಲಿದ್ದು, ನಂತರ ಹಿರಿಯ ಸಚಿವರೊಂದಿಗೆ ಚರ್ಚಿಸಿ ಸಿಐಡಿ ತನಿಖೆಗೆ ಸಿಎಂ ಆದೇಶಿಸಲಿದ್ದಾರೆ. ಅಲ್ಲದೆ ಸಿಡಿ ಪ್ರಕರಣದ ತನಿಖೆ ವಿಚಾರವಾಗಿ ಇಂದು ಬೆಳಗ್ಗೆ ಸಿಎಂ ಬಿಎಎಸ್ವೈ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಕಚೇರಿಯಲ್ಲಿ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿರಿ ಸೆಕ್ಸ್ ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್ ಕುಮಟಳ್ಳಿ!
ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಯುವತಿಯೊಬ್ಬಳಿಗೆ ಕೆಪಿಟಿಸಿಎಲ್ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಸಂತ್ರಸ್ತ ಯುವತಿಗೆ ಜೀವ ಬೆದರಿಕೆ ಇದೆ ಎಂದು ಆಕೆಯ ಕುಟುಂಬಸ್ಥರು ನನ್ನ ಬಳಿ ಸಹಾಯ ಕೇಳಿಕೊಂಡು ಬಂದಿದ್ದರು. ಈ ಪ್ರಕರಣದ ಸತ್ಯಾಸತ್ಯತೆಯನ್ನ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ವೈರಲ್ ಆಗಿತ್ತು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿತ್ತು. ಕೊನೆಗೆ ನೈತಿಕ ಹೊಣೆಹೊತ್ತು ರಮೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.
ಮೊನ್ನೆ ಇದ್ದಕ್ಕಿದ್ದಂತೆ ದಿನೇಶ್ ಕಲ್ಲಹಳ್ಳಿ ಕೇಸ್ ಹಿಂಪಡೆಯುವುದಾಗಿ ಹೇಳುವ ಮೂಲಕ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಆರಂಭದಿಂದಲೂ ಇದೊಂದು ರಾಜಕೀಯ ಷಡ್ಯಂತರ, ನಾನು ನಿರಪರಾಧಿ. ಆಯುವತಿ ಯಾರೆಂದು ನನಗೆ ಗೊತ್ತೇ ಇಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇಂದು ಸುದ್ದಿಗೋಷ್ಠಿ ನಡೆಸಿದ ಜಾರಕಿಹೊಳಿ, ಆ ಸಿಡಿ ನೂರಕ್ಕೆ ನೂರರಷ್ಟು ನಕಲಿ. ನಾನು ನಿರಪರಾಧಿ. ಈ ವಿಷಯ ನನಗೆ ನಾಲ್ಕು ತಿಂಗಳು ಮೊದಲೇ ತಿಳಿದಿತ್ತು. 26 ಗಂಟೆ ಮೊದಲೇ ಹೈಕಮಾಂಡ್ ಇದರ ಬಿಡುಗಡೆ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಆ ಕ್ಷಣದಲ್ಲಿ ನಾನು ಧೈರ್ಯ ಕಳೆದುಕೊಳ್ಳಲಿಲ್ಲ. ಕಾನೂನು ಹೋರಾಟಕ್ಕೆ ಹೋಗಲಿಲ್ಲ. 2+3+4 ಸೇರಿ ಈ ಕೆಲಸ ಮಾಡಿದ್ದಾರೆ. ಓರಿಯನ್ ಮಾಲ್ ಅಕ್ಕಪಕ್ಕ ಕೆಲಸ ಆಗಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನ ಕೈಬಿಡಲ್ಲ. ಅವರನ್ನು ಜೈಲಿಗೆ ಹಾಕಿಸುವುದು ನನ್ನ ಗುರಿ ಎಂದರು. ಈ ಕುರಿತು ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ಪ್ರತಿ ದೂರು ರಮೇಶ್ ಜಾರಕಿಹೊಳಿ ಸಿದ್ಧತೆ ನಡೆಸಿದ್ದಾರೆ.