More

    ಜಾರಕಿಹೊಳಿ ಸಿಡಿ ಪ್ರಕರಣ ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪೋ?

    ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪೋ ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಎಸ್​ಐಟಿಗೆ ಜೆಡಿಎಸ್​ ಒತ್ತಾಯಿಸಿದೆ.

    ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿಡಿ ಪ್ರಕರಣವೀಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ಸಿದ್ದರಾಮಯ್ಯರ ಹೆಸರು ಕೇಳಿಬರುವ ಮೂಲಕ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಶನಿವಾರ ಜೆಡಿಎಸ್​ ಟ್ವೀಟ್​ ಮಾಡಿದೆ. ಇದನ್ನೂ ಓದಿರಿ ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

    ರಾತ್ರಿ ಒಂದು ಆಡಿಯೋ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೋ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಜೆಡಿಎಸ್​ ಹೇಳಿದೆ.

    ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯ ಮತ್ತು ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೆ ತನಿಖೆ ನಡೆಸಿ, ಅಸಲಿ ಸತ್ಯ ಬಯಲಿಗೆಳೆಯಬೇಕು ಎಂದು ಸಲಹೆ ನೀಡಿದೆ. ಇದನ್ನೂ ಓದಿರಿ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು! ಮಾಜಿ ಸಚಿವರಿಗೆ ಸಂಕಷ್ಟದ ಮೇಲೋಂದು ಸಂಕಷ್ಟ ಎದುರಾಯ್ತು…

    ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

    ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ ಎಂದು ಜೆಡಿಎಸ್​ ಸರಣಿ ಟ್ವೀಟ್​ ಮಾಡಿದೆ.

    ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

    ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts