More

    ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…

    ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಕಾಮತೃಷೆಗೆ ಬಳಸಿಕೊಂಡ ಆರೋಪ ಹೊತ್ತ ರಮೇಶ್​ ಜಾರಕಿಹೊಳಿ ಸದ್ಯ ಬಿಎಸ್​ವೈ ಸಚಿವ ಸಂಪುಟದಿಂದ ಔಟ್​ ಆಗಿದ್ದಾರೆ. ಆದರೂ ರಾಜ್ಯ ರಾಜಕೀಯಲ್ಲಿ ಸಿಡಿ ರಿಲೀಸ್​ನದ್ದೇ ಸದ್ದು. ಇದೊಂದು ಪ್ಲಾನ್ಡ್ ಎಫರ್ಟ್, ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ‌ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಎಲ್ಲರ ಮೇಲೂ ಪ್ರಯೋಗ ಮಾಡುವ ಅಸ್ತ್ರ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಹೇಳಿದ ಬೆನ್ನಲ್ಲೇ ಇದಕ್ಕೆ ಶಾಸಕ ರಾಜೂಗೌಡ ದ್ವನಿ ಗೂಡಿಸಿದ್ದಾರೆ.

    ಗುರುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೂಗೌಡ, ರಮೇಶ್​ ಜಾರಕಿಹೊಳಿಯ ಮರ್ಯಾದೆ ಕಳೆಯಲು ಕೋಟಿಕೋಟಿ ಹಣ ಹೂಡಿದ್ದಾರೆ, ಸಿಡಿ ಕೇಸ್​ನಲ್ಲಿ ದಿನೇಶ್ ಕಲ್ಲಹಳ್ಳಿ ಕೇವಲ ದಾಳ ಮಾತ್ರ ಎಂದರು. ನಾನೂ ರಮೇಶಣ್ಣ ಸಂಬಂಧಿಕರು. 2000ನೇ ವರ್ಷದಿಂದ ನಮ್ಮಿಬ್ಬರ ನಡುವೆ ಉತ್ತಮ ಒಡನಾಟ ಇದೆ. ಸಿಡಿ ಪ್ರಕರಣದಲ್ಲಿ ರಮೇಶಣ್ಣನನ್ನು ಎಳೆತಂದದ್ದು ನೋವಿನ ಸಂಗತಿ. ಯುವತಿಗೆ ಕೆಲ್ಸ ಕೊಡಿಸುವ ನೆಪದಲ್ಲಿ ಮೋಸ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆ ವಿಡಿಯೋ ನೋಡಿದ್ರೆ ಮೋಸ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತಾ? ವ್ಯವಸ್ಥಿತವಾಗಿ ಹನಿಟ್ರ್ಯಾಪ್​ನಂತೆ ಇದನ್ನ ಮಾಡಿಸಿದ್ದಾರೆ. ಸಿಬಿಐನಿಂದ ತನಿಖೆ ಆಗಬೇಕು. ರಮೇಶಣ್ಣ ತಪ್ಪು ಮಾಡಿದ್ರೆ ಅವ್ರನ್ನ ಗಲ್ಲಿಗೇರಿಸಲಿ ಎಂದರು. ಇದನ್ನೂ ಓದಿರಿ ಇನ್ನೂ 19 ಜನರ ಸೆಕ್ಸ್​ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್​ಗೆ ಹೋಗ್ತಾರೆ..!

    ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ...ರಮೇಶಣ್ಣನ ಮೇಲೆ ದೊಡ್ಡ ಹುನ್ನಾರವೇ ನಡೆದಿದೆ. ರಷ್ಯಾದಿಂದ ವಿಡಿಯೋ ಅಪ್​ಲೋಡ್ ಆಗಿದೆ ಅನ್ನೋ ಮಾಹಿತಿ ಇದೆ. ರಾಜಕೀಯವಾಗಿ ಬೆಳೆಯುವುದನ್ನ ಸಹಿಸದವರು ಇಂಥದ್ದನ್ನು ಮಾಡಿದ್ದಾರೆ. ಮನುಷ್ಯ ಅಂದ ಮೇಲೆ ಕೆಲ ವೀಕ್ನೆಸ್​ ಇರುತ್ತೆ. ಅದನ್ನೇ ಬಂಡವಾಳ ಮಾಡಿಕೊಳ್ಳೋದು ಸರಿಯಲ್ಲ. ರಾಜಕೀಯ ಷಡ್ಯಂತ್ರಕ್ಕೆ ರಮೇಶಣ್ಣನ ಕುಟುಂಬ ಕಣ್ಣೀರು ಹಾಕ್ತಿದೆ. ರಮೇಶ್ ಜಾರಕಿಹೊಳಿ ಅವ್ರನ್ನ ತುಂಬಾ ದಿನದಿಂದ ಬಲ್ಲವರೇ ಇಂಥದ್ದನ್ನ ಮಾಡಿದ್ದಾರೆ. ದಿನೇಶ್ ಕಲ್ಲಹಳ್ಳಿ ಅವರನ್ನ ಕೇವಲ ದಾಳವನ್ನಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ರಾಜೂಗೌಡ ಗಂಭೀರ ಆರೋಪ ಮಾಡಿದರು.

    ನಾಲ್ಕೈದು ಸರ್ವರ್​ನಲ್ಲಿ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ವಿಡಿಯೋ ಅಪ್​ಲೋಡ್ ಮಾಡಿದ್ದಾರೆ. ಒಂದೊಂದು ಸರ್ವರ್ ಬುಕ್ ಮಾಡ್ಬೇಕು ಅಂದ್ರೆ ಕೋಟಿ ಕೋಟಿ ಹಣ ಕೊಡ್ಬೇಕು. ಈ ಹಣವನ್ನ ದಿನೇಶ್ ಕಲ್ಲಹಳ್ಳಿ ನೀಡಲು ಸಾಧ್ಯವಿಲ್ಲ. ಕೋಟಿ ಕೋಟಿ ಹಣ ಯಾರು ಕೊಟ್ಟಿದ್ದಾರೆ? ಅನ್ನೋದು ತನಿಖೆ ಆಗ್ಬೇಕು. ಆರೋಪ ಮುಕ್ತರಾಗಿ ಆಚೆ ಬರ್ತಾರೆ ಅನ್ನೋ ವಿಶ್ವಾಸವಿದೆ ಎಂದರು.

    ಪಕ್ಷಕ್ಕೆ ಮುಜುಗರ ಆಗಬಾರದು ಅಂತ ರಮೇಶಣ್ಣ ರಾಜೀನಾಮೆ ಕೊಟ್ಟಿದ್ದಾರೆ. ಯಾವುದೇ ಕಂಡಿಷನ್ ಇಲ್ಲದೆ ರಾಜೀನಾಮೆ ಕೊಟ್ಟಿದ್ದಾರೆ. ನಾನು ರಮೇಶ್ ಜಾರಕಿಹೊಳಿ ಅವ್ರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದೇನೆ. ರಮೇಶ್ ಅವ್ರ ಮಗನಿಗೆ ಧೈರ್ಯ ತುಂಬಿದ್ದೀನಿ ಎಂದರು.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಇನ್ನೂ 19 ಜನರ ಸೆಕ್ಸ್​ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್​ಗೆ ಹೋಗ್ತಾರೆ..!

    ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ: ಹಲವು ಅನುಮಾನ ಹುಟ್ಟಿಸಿದೆ ಡಾ.ಸುಧಾಕರ್​ ಹೇಳಿಕೆ

    ಸೆಕ್ಸ್​ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಜಾರಕಿಹೊಳಿ, ಷರತ್ತುಗಳು ಅನ್ವಯ!

    ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts