More

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ರಮೇಶ್​ ಜಾರಕಿಹೊಳಿ

    ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕಾನೂನು ಬಾಹಿರವಾಗಿ ಕಾಮಗಾರಿ ಕೈಗೊಂಡಿದ್ದರೆ ಅಥವಾ ನದಿ ನೀರು ತಿರುಗಿಸಿಕೊಂಡಿರುವುದನ್ನು ಗೋವಾ ಮುಖ್ಯಮಂತ್ರಿ ಸಾಬೀತು ಪಡಿಸಿದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಸವಾಲು ಹಾಕಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್​ ಜಾರಕಿಹೊಳಿ, ಗೋವಾ ಮುಖ್ಯಮಂತ್ರಿ ಆಧಾರ ರಹಿತವಾಗಿ ಆರೋಪ ಮಾಡುವ ಬದಲು ಮಹದಾಯಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅಲ್ಲೇನು ಕಾಮಗಾರಿ ನಡೆದಿದೆ ಎಂಬುದನ್ನು ಮೊದಲು ಪರಿಶೀಲಿಸಲಿ ಎಂದು ಆಗ್ರಹಿಸಿದ್ದಾರೆ.

    ಈಗಾಗಲೇ ಮಹದಾಯಿ ನ್ಯಾಯಾಧಿಕರಣವು ಕಾಮಗಾರಿ ಕೈಗೊಳ್ಳಲು ನಮಗೆ ಅನುಮತಿ ನೀಡಿದೆ. ಆದರೆ, ಕೋವಿಡ್-19 ಹಿನ್ನೆಲೆಯಲ್ಲಿ ವಿಳಂಬವಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗೋವಾ ಸರ್ಕಾರ ಕಾಮಗಾರಿ ತಡೆಹಿಡಿಯುವಂತೆ ಮೇಲ್ಮನವಿ ಸಲ್ಲಿಸಿರುವ ವಿಷಯ ನಮ್ಮ ಗಮನಕ್ಕೆ ತಂದಿಲ್ಲ. ಇದು ಕೋರ್ಟ್​ ವಿಚಾರವಾಗಿದ್ದರಿಂದ ನಾನೇನೂ ಚರ್ಚಿಸುವುದಿಲ್ಲ ಎಂದು ರಮೇಶ್​ ಜಾರಕಿಹೊಳಿ ಹೇಳಿದರು.

    ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್​ ಸೇರಿ ಯಾವುದೇ ಪಕ್ಷದ ಸರ್ಕಾರ ಇದ್ದರೂ ಅವರೆಲ್ಲರೂ ಮಹದಾಯಿ ವಿಷಯವನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರೆಲ್ಲರ ರಾಜಕೀಯ ಗಿಮಿಕ್​ ಅದು. ಅವರ ರಾಜ್ಯದ ಹಕ್ಕು ಅವರು ಮಂಡಿಸುತ್ತಿದ್ದು, ನಾವು ನಮ್ಮ ರಾಜ್ಯದ ಹಕ್ಕು ಮಂಡಿಸುತ್ತಿದ್ದೇವೆ ಎಂದರು.

    ಸಭೆ ಮುಂದೂಡಿಕೆ: ಉತ್ತರ ಕರ್ನಾಟಕ ಭಾಗದಲ್ಲಿ ಕಳಸಾ ಬಂಡೂರಿ, ಗಟ್ಟಿ ಬಸವಣ್ಣ ಮತ್ತು ಇತರೆ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಗ್ರಾಪಂ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮುಂದೂಡಲಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

    ನಿಖಿಲ್​-ಪ್ರಜ್ವಲ್ ಒಟ್ಟಾಗಿ ಯುದ್ಧಕ್ಕೆ ಹೋಗಲಿ..! ಚಿಕ್ಕಪ್ಪ-ದೊಡ್ಡಪ್ಪನ ಎದುರಲ್ಲೇ ಸವಾಲು

    ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts