More

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ಎನ್​​​ಐಎ ವಶಕ್ಕೆ

    ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಈ ಇಬ್ಬರೂ ಬಾಂಬ‌ರ್ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಾಂಬ್ ಇಟ್ಟ ಕಿಂಗ್ ಪಿನ್ ಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿ ಆತನ ಸಂಪರ್ಕ ಹೊಂದಿದ್ದವರನ್ನು ವಶಕ್ಕೆ ಪಡೆಯಲಾಗಿದ್ದು, ನೇರ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹಿಸಲಾಗಿದೆ.

    ಶನಿವಾರ ಸಂಜೆ ಇಬ್ಬರನ್ನು ವಶಕ್ಕೆ ಪಡೆದುಕೊಂಡ ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಬಾಂಬರ್ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

    ಮಾರ್ಚ್ 1 ರಂದು ಕರ್ನಾಟಕದ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ರೆಸ್ಟೋರೆಂಟ್‌ನಲ್ಲಿ ಸ್ಫೋಟ ಸಂಭವಿಸಿತ್ತು. ರೆಸ್ಟೋರೆಂಟ್​ನ ಇಬ್ಬರು ಕೆಲಸಗಾರರು ಸೇರಿದಂತೆ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಸಂಸತ್ ಚುನಾವಣೆ ಸಮೀಪ ಇರುವಾಗಲೇ ಈ ಘಟನೆಯು ದೇಶಾದ್ಯಂತ ಸಂಚಲನ ಮೂಡಿಸಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸ್ಫೋಟದ ಘಟನೆಯ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ.

    ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಶಂಕಿತ ಧರಿಸಿದ್ದ ಕ್ಯಾಪ್​ನಿಂದ ಸಿಕ್ತು ಮಹತ್ವದ ಸುಳಿವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts