More

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಿಜೆಪಿಯ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್ಐಎ!?  

    ತೀರ್ಥಹಳ್ಳಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ಎನ್ಐಎ ವಿಚಾರಣೆಗೆ ಒಳಪಡಿಸಿದೆ ಎನ್ನಲಾಗಿದೆ.

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಗ್ಗೆ ಎನ್‌ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

    ಇದರ ಬೆನ್ನಲ್ಲೆ  ಇದೀಗ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

    ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆ ನಡೆಸಿದ್ದ ಎನ್‌ಐಎ ತಂಡ ಈ ಹುಡುಗರ ಜೊತೆ ನಗರ ಘಟಕದ ಮುಖಂಡ ಸಂಪರ್ಕ ಇದ್ದ ಕಾರಣ ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.

    ಬೆಂಗಳೂರಿನ ರಾಮೇಶ್ವರಂ ರೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಥೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ರೆಫೆ ಬೆಂಗಳೂರಿನಲ್ಲಿರುವ ಬಹಳ ಜನಪ್ರಿಯ ಕೆಫೆಯಾಗಿದೆ.

    ಅಶ್ವಿನಿ ಪುನೀತ್‌ರಾಜಕುಮಾರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರತಿಕ್ರಿಯೆ ನೀಡಿದ ನಟ ದರ್ಶನ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts