More

    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಿಎಂಟಿಸಿ ಬಸ್‍ನಲ್ಲಿ ಶಂಕಿತ ಪ್ರಯಾಣ, ಎನ್‌ಐಎ ವಿಡಿಯೋ ಬಿಡುಗಡೆ

    ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದರ ಬೆನ್ನೆಲ್ಲೇ ಆರೋಪಿ ಪತ್ತೆಗೆ ಸಹಾಯವಾಗಲು ಆರೋಪಿಯ ಓಡಾಟದ ಮತ್ತೆರಡು ವಿಡಿಯೋವನ್ನ ಎನ್​ಐಎ ರಿಲೀಸ್​ ಮಾಡಿದೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಬಂಗಾಳದಿಂದ ಮೊಹಮ್ಮದ್ ಶಮಿ ಬಿಜೆಪಿ ಅಭ್ಯರ್ಥಿ? ಈ ಕ್ಷೇತ್ರದಿಂದ ಕಣಕ್ಕೆ! 

    ಬಿಎಂಟಿಸಿ ಬಸ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್, ಮಾಸ್ಕ್ ಹಾಗೂ ಕನ್ನಡಕ ಧರಿಸಿರುವ ಆರೋಪಿಯು ಬಸ್‌ನಲ್ಲಿ ಕುರಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿದೆ. ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ಹೇಳಿದೆ.

    ಶಂಕಿತ ಬಾಂಬರ್​ನ ಸುಳಿವು ಸಿಕ್ಕ ಕೂಡಲೇ 080 29510900, 8904241100 ಹಾಗೂ ಇ–ಮೇಲ್‌ ವಿಳಾಸ [email protected]ಗೆ ಮಾಹಿತಿ ನೀಡಬಹುದು ‌ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

    ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ ಬಳ್ಳಾರಿಯ ಸೈಯದ್ ಸಮೀರ್, ಮುಂಬೈ ನ ಅನಾಸ್ ಇಕ್ಬಾಲ್ ಶೇಖ್ ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    ವಶಕ್ಕೆ ಪಡೆದಿರುವ ಶಂಕಿತ ಉಗ್ರರು ISIS ಜೊತೆ ನಂಟು ಹೊಂದಿದ್ದಾರೆ. ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್ಐಎ ಅಧಿಕಾರಿಗಳು 2023ರ ಡಿಸೆಂಬರ್ 18ರಂದು ಮಿನಾಜ್ ಹಾಗೂ ಇತರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸದ್ಯ ವಶಕ್ಕೆ ಪಡೆದಿರುವ ಶಂಕಿತರನ್ನು ಬಳ್ಳಾರಿಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

    ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾರ್ಲಿಂಗ್‌ ಕೃಷ್ಣ-ಮಿಲನಾ ನಾಗರಾಜ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts