More

    ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ; ED ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ರಣಬೀರ್

    ಮುಂಬೈ: ಮಹದೇವ್​ ಬೆಟ್ಟಿಂಗ್​ ಆ್ಯಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್​ ಕಪೂರ್​ ಜಾರಿ ನಿರ್ದೇಶನಾಲಯದ (ED) ವಿಚಾರಣೆಗೆ ಹಾಜರಾಗಲು ಎರಡು ವಾರಗಳ ಕಾಲಾವಕಾಶ ಕೋರಿದ್ದಾರೆ.

    ಛತ್ತೀಸ್‌ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ಅಕ್ಟೋಬರ್​ 6ರಂದು ವಿಚಾರಣೆಗೆ ಹಾಜರಾಗುವಂತೆ ಬುಧವಾರ (ಅಕ್ಟೋಬರ್ 04) ನೋಟಿಸ್​ ಜಾರಿ ಮಾಡಿತ್ತು.

    Ranbir Kapoor ED

    ಇದನ್ನೂ ಓದಿ: ನಾರ್ವೆ ಬರಹಗಾರ ಜಾನ್​ ಫಾಸ್ಸೆಗೆ ಒಲಿದ 2023ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್​ ಪ್ರಶಸ್ತಿ

    ಸಾಮಾಜಿಕ ಜಾಲತಾಣಗಳಲ್ಲಿ ಆನ್​ಲೈನ್​ ಬೆಟ್ಟಿಂಗ್​ನಲ್ಲಿ ಹೂಡಿಕೆ ಮಾಡುವಂತೆ ಪ್ರಚೋದಿಸಿದ್ದಕ್ಕೆ ಜಾರಿ ನಿರ್ದೇಶನಾಲಯ ನಟ ರಣಬೀರ್​ ಕಪೂರ್​ಗೆ ಸಮನ್ಸ್​ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಸುಮಾರು 14-15 ಸೆಲೆಬ್ರಿಟಿಗಳು ಮತ್ತು ನಟರನ್ನು ಸಹ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಶೀಘ್ರದಲ್ಲೇ ಸಮನ್ಸ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ತಿಂಗಳು ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 417 ಕೋಟಿ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ಈ ಆ್ಯಪ್​ನ ಅನೇಕ ಜಾಹೀರಾತುಗಳಲ್ಲಿ ರಣಬೀರ್ ಕಪೂರ್ ಅವರು ಕಾಣಿಸಿಕೊಂಡಿದ್ದು, ಈ ಸಂಬಂಧ ಅವರಿಗೆ ಸಿಕ್ಕಾಪಟ್ಟೆ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗಿದೆ. ಹಾಗಾಗಿ ರಣಬೀರ್ ಕಪೂರ್ ಅವರನ್ನು ಅಕ್ಟೋಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts