More

    ರಕ್ತ ದಾನದ ರೂಪದಲ್ಲಿಯೆ ಪಡೆಯಬೇಕು; ಪ್ರಕಾಶಾನಂದಜಿ ಮಹಾರಾಜ್

    ರಾಣೆಬೆನ್ನೂರ: ಮನುಷ್ಯ ವೈಜ್ಞಾನಿಕವಾಗಿ ಬಹಳಷ್ಟು ಮುಂದುವರೆದಿದ್ದರೂ ಈವರೆಗೂ ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಾಗಿಲ್ಲ. ಆದ್ದರಿಂದ ರಕ್ತವನ್ನು ಬೇರೊಬ್ಬರಿಂದ ದಾನದ ರೂಪದಲ್ಲಿಯೆ ಪಡೆಯಬೇಕಿದೆ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದಜಿ ಮಹಾರಾಜ್ ಹೇಳಿದರು.
    ನಗರದ ಮುನ್ಸಿಪಲ್ ಮೈದಾನದಲ್ಲಿ ಶಹರ ಪೊಲೀಸ್ ಠಾಣೆ ಹಾಗೂ ಅಕ್ಕಿಆಲೂರಿನ ಸ್ನೇಹ ಮೈತ್ರಿ ಬ್ಲಡ್ ಆರ್ಮಿ ಸಹಯೋಗದಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಮಾನವ ದೇಹದ ಜೀವಸೆಲೆಯಾದ ರಕ್ತವನ್ನು ದಾನವಾಗಿ ನೀಡುವ ಮೂಲಕ ಇನ್ನೊಂದು ಜೀವ ಉಳಿಸುವುದು ಮಹತ್ಕಾರ್ಯವಾಗಿದೆ. ಆದ್ದರಿಂದ 18-60 ವರ್ಷದೊಳಗಿನ ಆರೋಗ್ಯವಂತ ವ್ಯಕ್ತಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದರು.
    ವಂದೇ ಮಾತರಂ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ, ಪಿಎಸ್‌ಐ ಎಚ್.ಎನ್. ದೊಡ್ಡಮನಿ, ಎಎಸ್‌ಐ ವಿಜಯಕುಮಾರ ಬಳಿಗಾರ, ವೀರೇಶ ಮೋಟಗಿ, ಕೃಷ್ಣಾರೆಡ್ಡಿ, ನಾರಾಯಣ ಪವಾರ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts