More

  ಸಿಲಿಂಡರ್ ಬೆಲೆ ಇಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

  ರಾಣೆಬೆನ್ನೂರ: ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿ ಹಾಗೂ ಚನ್ನಗಿರಿ ಶಾಸಕ ಮಾಡಾಳ ವೀರುಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಗ್ರಾಮೀಣ ಹಾಗೂ ನಗರ ಘಟಕದ ವತಿಯಿಂದ ನಗರದ ಬಸ್ ನಿಲ್ದಾಣದ ಎದುರು ಭಾನುವಾರ ಪ್ರತಿಭಟನೆ ನಡೆಸಲಾಯಿತು.

  ವಿನಾಯಕ ನಗರದ ಕಾಂಗ್ರೆಸ್ ಕಚೇರಿಯಿಂದ ಬಸ್ ನಿಲ್ದಾಣದ ವೃತ್ತದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜನಸಾಮಾನ್ಯರ ದಿನನಿತ್ಯ ಬದುಕಿಗೆ ಅವಶ್ಯವಿರುವ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಕಳೆದ 8ರಿಂದ 10 ವರ್ಷದಲ್ಲಿ ಬಹಳಷ್ಟು ಏರಿಕೆ ಮಾಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ 300 ರೂ. ಇದ್ದ ಸಿಲಿಂಡರ್ ಈಗ 1 ಸಾವಿರ ರೂ. ದಾಟಿ ಹೋಗಿದೆ. ಇದರಿಂದ ಬಡವರಿಗೆ ಸಿಲಿಂಡರ್ ಖರೀದಿಸುವುದು ಕಷ್ಟಸಾಧ್ಯವಾಗಿದೆ.

  ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಸಿಲಿಂಡರ್ ಬೆಲೆ ಕಡಿಮೆ ಮಾಡಬೇಕು. ಚನ್ನಗಿರಿ ಶಾಸಕ ಮಾಡಾಳ ವೀರುಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಿ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಬಂದ ತಹಸೀಲ್ದಾರ್ ಗುರುಬಸವರಾಜ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts