More

  ಯುಟಿಪಿ ಕಾಲುವೆಗಳಿಗೆ ನೀರು ಹರಿಸಲು ರೈತರ ಆಗ್ರಹ

  ರಾಣೆಬೆನ್ನೂರ: ಮಳೆ ಕೊರತೆಯಿಂದ ರೈತರು ನೀರಿನ ತೊಂದರೆಯಿಂದ ಬೇಸತ್ತು ಹೋಗಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಂಡು ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗಳಿಗೆ ತುಂಗಾ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ಯೋಜನೆಯ ತಾಂತ್ರಿಕ ಇಂಜಿನಿಯರ್ ಶ್ರೀಧರ ಪಿ.ಸಿ. ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿ, ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಅಪಾರ ವೆಚ್ಚದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಹಾಕಿ ಬಿತ್ತನೆ ಮಾಡಿದ ರೈತ ಮುಂಗಾರು ಮಳೆ ಕ್ಷೀಣಿಸಿದ್ದರಿಂದ ಆಕಾಶದ ಕಡೆ ಮುಖ ಮಾಡುವಂತಾಗಿದೆ.
  ನೀರಿನ ಕೊರತೆಯಿಂದ ಬೆಳೆಗಳು ಬತ್ತುತ್ತಿವೆ. ಜಿಲ್ಲೆಯಲ್ಲಿರುವ ಕೆರೆ, ಕಟ್ಟೆಗಳು ಬರಿದಾಗಿರುವುದರಿಂದ ಜನ ಮತ್ತು ಜಾನುವಾರುಗಳು, ವನ್ಯ ಜೀವಿಗಳು ಕೂಡ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಕೆಳದ 3 ದಿನಗಳಿಂದ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಗಳಲ್ಲಿ ಧಾರಕಾರವಾಗಿ ಮಳೆ ಸುರಿಯುತ್ತಿರುವುದರಿಂದ ತುಂಗಾ ಜಲಾಶಯ ಭರ್ತಿಯಾಗಿದೆ.
  ಆದ್ದರಿಂದ ತುಂಗಾ ಮೇಲ್ದಂಡೆ ಅಧಿಕಾರಿಗಳು ಈ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ನೆಪ ಒಡ್ಡದೆ ತುರ್ತಾಗಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಗೆ ನೀರನ್ನು ಹರಿಸಿ ರೈತರು ಉಳಿದಿರುವ ಬೆಳೆಗಳನ್ನಾದರೂ ಬದುಕಿಸಿಕೊಳ್ಳಲಿಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts