More

    ಖಾಸಗಿ ಶಾಲಾ-ಕಾಲೇಜ್, ಶಿಕ್ಷಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ; ರುದ್ರಪ್ಪ ಲಮಾಣಿ

    ರಾಣೆಬೆನ್ನೂರ: ರಾಜ್ಯದಲ್ಲಿರುವ ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜ್‌ಗಳ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಲ್ಪಿಸಲಾಗುವುದು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
    ನಗರದ ಬಿ.ಎ.ಜೆ.ಎಸ್.ಎಸ್. ಕಾಲೇಜ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು.
    1995ರ ನಂತರದಲ್ಲಿ ಪ್ರಾರಂಭವಾಗಿರುವ ಶಾಲಾ-ಕಾಲೇಜ್‌ಗಳಿಗೆ ಅನುದಾನ ನೀಡುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಉಭಯ ಸದನಗಳಲ್ಲಿ ಚರ್ಚಿಸಲಾಗಿದ್ದು, ಶೀಘ್ರವೇ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದರು.
    ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಯುವಕ ಯುವತಿಯರಿಗೆ ಕಂಪ್ಯೂಟರ್ ಮತ್ತು ಸ್ಪೊಕನ್ ಇಂಗ್ಲೀಷ್ ಕೌಶಲಗಳ ತರಬೇತಿ ಪಡೆದವರಿಗೆ ಮಾತ್ರ ಉದ್ಯೊಗ ಅವಕಾಶಗಳು ಲಭಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಈ ದಿಸೆಯಲ್ಲಿ ಅಧ್ಯಯನ ಮಾಡಬೇಕು ಎಂದರು.
    ಸಂಸ್ಥೆಯ ಆಡಳಿತಾಧಿಕಾರಿ ಡಾ. ಆರ್.ಎಂ. ಕುಬೇರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾಲೇಜ್‌ನ ಆಡಳಿತ ಮಂಡಳಿ ವತಿಯಿಂದ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹಾಗೂ ಶಾಸಕ ಪ್ರಕಾಶ ಕೋಳಿವಾಡ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts