More

    ಮನಸ್ಸಿನ ಶುದ್ಧತೆಯಿಂದ ಶಾಂತಿ, ನೆಮ್ಮದಿ ಪ್ರಾಪ್ತಿ

    ರಾಣೆಬೆನ್ನೂರ: ಮನುಜನು ತನ್ನ ಜೀವಿತ ಕಾಲದಲ್ಲಿ ಮನಸ್ಸು, ಬುದ್ಧಿ, ಚಿತ್ತ ಎಲ್ಲಿಯವರೆಗೂ ಶುದ್ಧವಾಗಿರುವುದಿಲ್ಲವೋ ಅಲ್ಲಿಯವರೆಗೂ ಶಾಂತಿ, ನೆಮ್ಮದಿ ಹಾಗೂ ಸಂತೃಪ್ತಿ ಮತ್ತು ಮುಕ್ತಿ ಸಿಗುವುದಿಲ್ಲ ಎಂದು ಇಂಚಲ ಶಿವಯೋಗಿಶ್ವರ ಸಾಧು ಸಂಸ್ಥಾನಮಠದ ಡಾ. ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು.
    ತಾಲೂಕಿನ ಖಂಡೇರಾಯನಹಳ್ಳಿ ಶ್ರೀ ಸಿದ್ಧಾರೂಢ ಮಠದಲ್ಲಿ ಸದ್ಗುರು ಸಿದ್ಧಾರೂಢ ಸ್ವಾಮಿಯವರ ಜಯಂತಿ ನಿಮಿತ್ತ ಬುಧವಾರ ಏರ್ಪಡಿಸಿದ್ದ 26ನೇ ವೇದಾಂತ ಪರಿಷತ್ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
    ಮನುಷ್ಯ ಮನಸ್ಸು, ಬುದ್ದಿ, ಚಿತ್ತಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಸದ್ಗುರುವಿನ ಉಪದೇಶವನ್ನು ಆಲಿಸಿದಾಗಲೇ ಮನುಜ ಸದ್ಗತಿ ಪಡೆಯಲು ಸಾಧ್ಯ. ಮಹಾತ್ಮರ ದರ್ಶನ ಫಲದಿಂದಾಗಿ ಕಠೋರತೆಯಿಂದ ಕಾಡಿನಲ್ಲಿ ಜೀವಿಸುತ್ತಿದ್ದ ವಾಲ್ಮಿಕಿ ಶ್ರೀರಾಮನ ದರ್ಶನ ಪಡೆದ ಕಾರಣ ಸಾಕ್ಷಾತ್ಕಾರ ಹೊಂದಿ ರಾಮಾಯಣ ರಚಿಸಿ ಆದಿಕವಿ ವಾಲ್ಮಿಕಿ ಮಹರ್ಷಿಯಾದರು. ಸತ್ಸಂಗವು ಮನುಷ್ಯನನ್ನು ಒತ್ತಡದ ಜೀವನದಿಂದ ಬಿಡುಗಡೆ ಪಡೆದು ಮುಕ್ತಿಯ ಕಡೆಗೆ ಕೊಂಡೊಯ್ಯುವ ಸನ್ಮಾರ್ಗವಾಗಿದೆ ಎಂದರು.
    ಮಠದ ಪೀಠಾಧಿಪತಿ ನಾಗರಾಜಾನಂದ ಸ್ವಾಮೀಜಿ, ಹಂಪಿ ಹೇಮಕೂಟದ ವಿದ್ಯಾನಂದ ಭಾರತಿ ಸ್ವಾಮೀಜಿ, ಚಳಗೇರಿ ಕಟಗಿಹಳ್ಳಿಮಠದ ಡಾ. ಮಹಾಂತೇಶ್ವರ ಸ್ವಾಮೀಜಿ, ದಾವಣಗೆರೆ ಜಡೆಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ, ಇಂಚಲದ ಪ್ರರ್ಣಾನಂದ ಭಾರತಿ ಸ್ವಾಮೀಜಿ, ಹದಡಿಯ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ, ಮಣಕೂರ ಸಿದ್ಧಾರೂಢ ಗುರುದೇವಾಶ್ರಮದ ಮಾತಾಜಿ ಚನ್ನಬಸಮ್ಮನವರು, ಗೋಕಾಕ ತಾಲೂಕಿನ ಹಡಗಿನಾಳದ ಸುಜ್ಞಾನ ಕುಟೀರದ ಮಲ್ಲೇಶ್ವರ ಶರಣರು ಸಾನ್ನಿಧ್ಯ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts