More

    ನರೇಗಾ ಕೂಲಿ ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

    ರಾಣೆಬೆನ್ನೂರ: ಕೂಲಿ ಕಾರ್ಮಿಕರು ತಮ್ಮ ದುಡಿಮೆಯ ಜತೆಗೆ ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಮಲತಾ ಎಸ್.ಪಿ. ಹೇಳಿದರು.
    ತಾಲೂಕಿನ ಸುಣಕಲ್ಲಬಿದರಿ ಗ್ರಾಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಮ್ಮಿಕೊಂಡಿರುವ ಕೊಳ್ಳಾರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ತಾಲೂಕು ಆರೋಗ್ಯ ಇಲಾಖೆಯ ಹಾಗೂ ಗ್ರಾಪಂನಿಂದ ಶುಕ್ರವಾರ ಏರ್ಪಡಿಸಿದ್ದ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಮೇ ತಿಂಗಳಲ್ಲಿ ಅತಿಯಾದ ತಾಪಮಾನ ಇರುವುದರಿಂದ ಕೂಲಿ ಕಾರ್ಮಿಕರಿಗೆ ತಮ್ಮ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ ಮಾಡಲಾಗಿದೆ. ರೈತರು ವೈಯಕ್ತಿಕ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಸಿಗುವ ಸೌಲಭ್ಯ ಬಳಸಿಕೊಳ್ಳಬೇಕು ಎಂದರು.
    ನರೇಗಾ ಯೋಜನೆಯ ಸಹಾಯಕ ನಿರ್ದೇಕ ಪರಶುರಾಮ ಪೂಜಾರ ಮಾತನಾಡಿ, ಕೂಲಿ ಕಾರ್ಮಿಕರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಕಾಯಿಲೆಗಳಾದ ರಕ್ತದ ಒತ್ತಡ, ಶುಗರ್, ಎಚ್.ಐ.ವಿ.ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಸೇರಿ ಇತರ ಕಾಯಿಗಳ ಕುರಿತು ಸ್ಥಳದಲ್ಲಿಯೆ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ಕೊಡಿಸಲಾಗುವುದು ಎಂದರು.
    ತಾಪಂ ಅಭಿವೃದ್ಧಿ ಅಧಿಕಾರಿ ಮಾಲತೇಶ ಮಡಿವಾಳರ, ಕವಿತಾ ಬೆಟ್ಟದ, ತಾಲೂಕ ಸಯೋಜಕ ಡಿ.ವಿ. ಅಂಗೂರ, ಆರೋಗ್ಯ ಅಮೃತ್ ಅಭಿಯಾನದ ತಾಲೂಕು ಸಂಯೋಜಕ ಮಂಜಪ್ಪ ತಂಬೂರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ರಾಧಿಕಾ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts