More

    ಮೊದಲ ದಿನ ಗುಲಾಬಿ ಹೂವು ನೀಡಿ ಮಕ್ಕಳಿಗೆ ಸ್ವಾಗತ

    ರಾಣೆಬೆನ್ನೂರ: ಮಕ್ಕಳ ಉಜ್ವಲವಾದ ಭವಿಷ್ಯ ಅಡಗಿರುವುದು ಶಿಕ್ಷಣದಲ್ಲಿ. ಆದ್ದರಿಂದ ಪಾಲಕರು ಮತ್ತು ಪೋಷಕರು ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಿ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
    ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.7ರಲ್ಲಿ ಬುಧವಾರ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವ ಸಮಾರಂಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ ಅವರು ಮಾತನಾಡಿದರು.
    ಅತ್ಯಂತ ಸಡಗರ ಸಂಭ್ರಮದಿಂದ ಮಕ್ಕಳು ಶಾಲೆಗೆ ಆಗಮಿಸಿರುವುದು ಸಂತೋಷದ ಸಂಗತಿಯಾಗಿದೆ. ಮಕ್ಕಳ ಬಗ್ಗೆ ಶಿಕ್ಷಕರೂ ಹೆಚ್ಚಿನ ಕಾಳಜಿವಹಿಸಿ ಉತ್ತಮವಾದ ಶಿಕ್ಷಣ ನೀಡಬೇಕು. ಅಂದಾಗ ಮಕ್ಕಳು ಸಮಾಜದಲ್ಲಿ ಪ್ರಜ್ವಲಿಸಲು ಸಾಧ್ಯ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಮಾತನಾಡಿ, ಮಕ್ಕಳ ಶೈಕ್ಷಣಿಕ ಕಲಿಕೆಗಾಗಿ ಈಗಾಗಲೇ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡಲಾಗಿದೆ. ಮಕ್ಕಳು ಅವುಗಳ ಸದುಪಯೋಗ ಪಡೆದುಕೊಂಡು ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.
    ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಎಸಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
    ಹೋಳಿಗೆ, ಗೋಧಿ ಹುಗ್ಗಿ ಊಟ…
    ಶಾಲೆ ಆರಂಭದ ಮೊದಲ ದಿನವಾದ ಬುಧವಾರ ನಗರ ಸೇರಿ ತಾಲೂಕಿನಾದ್ಯಂತ ಶಾಲೆಗಳನ್ನು ಹಸಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು. ಕೆಲ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಹೋಳಿ ಊಟ ಬಡಿಸಿದರೆ, ಕೆಲವು ಶಾಲೆಯಲ್ಲಿ ಗೋಧಿ ಹುಗ್ಗಿ ಬಡಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts