ರಾಣೆಬೆನ್ನೂರ: ಅಮೂಲ್ಯವಾದ ಜೀವವನ್ನು ರಕ್ಷಿಸಿಕೊಳ್ಳಲು ವಾಹನ ಸವಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಹೇಳಿದರು.
ಇಲ್ಲಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ&-2025ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಣ್ಣಪುಟ್ಟ ತಪ್ಪಿನಿಂದ, ತಾತ್ಸಾರ, ಬೇಜವಾಬ್ದಾರಿ ಹಾಗೂ ನಿರ್ಲಕ್ಷತನದಿಂದ ವಾಹನ ಚಾಲನೆ ಮಾಡುವುದರಿಂದಾಗಿ ದೊಡ್ಡ ಅನಾಹುತ ಉಂಟಾಗಿ ಸಾವು ನೋವು ಸಂಭವಿಸುವ ಸಂಖ್ಯೆ ಹೆಚ್ಚಾಗಿರುವುದು ನೋವಿನ ಸಂಗತಿಯಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಅತಿ ವೇಗ ಅವಸರಕ್ಕೆ ಕಾರಣ, ಚಾಲನೆ ಮಾಡುವಾಗ ಸಂಕೇತಗಳನ್ನು ಪಾಲಿಸಬೇಕು. ಸೀಟ್ ಬೆಲ್ಟ್ ಬಳಸಬೇಕು ಮುಖ್ಯವಾಗಿ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು ಎಂದರು.
ಅಪಘಾತ ಸಂಖ್ಯೆಗಳ ಕಡಿವಾಣ ಮಾಡಲು ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ವಿದ್ಯಾಥಿರ್ಗಳಿಗೆ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕು. ಆಂದೋಲನದ ಮೂಲಕ ಎಲ್ಲರಲ್ಲೂ ಜಾಗೃತಿ ಮೂಡಬೇಕಾಗಿದೆ ಎಂದರು.
ಈ ಸಮಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಕುರಿತು ಜನರಿಗೆ ಅರಿವು ಮೂಡಿಸುವ ಭಿತ್ತಿಚಿತ್ರ ಬಿಡುಗಡೆ ಮಾಡಲಾಯಿತು.
ಹಿರಿಯ ಮೋಟಾರು ವಾಹನ ನಿರೀಕ್ಷಕ ಅನಿಲ ಮಾಸೂರು, ಕಚೇರಿ ಸಿಬ್ಬಂದಿ ಈಶ್ವರಪ್ಪ ತೇಲಿ, ನಾಗರಾಜ ಟಿ.ಕೆ.,
ಆರ್. ಜಗದೀಶ ಮತ್ತಿತರರು ಉಪಸ್ಥಿತರಿದ್ದರು.
