More

    ರಾಣೆಬೆನ್ನೂರ ಕಾ ರಾಜಾ ಗಣಪತಿ ವಿಸರ್ಜನೆ ಇಂದು; ಡಿಜೆ, ವಿವಿಧ ಕಲಾ ತಂಡಗಳೊಂದಿಗೆ ಬೃಹತ್ ಶೋಭಾಯಾತ್ರೆ

    ರಾಣಿಬೆನ್ನೂರ: ಸ್ಥಳೀಯ ವಂದೇ ಮಾತರಂ ಸ್ವಯಂಸೇವಾ ಸಂಸ್ಥೆ ವತಿಯಿಂದ ಇಲ್ಲಿನ ನಗರಸಭೆ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಿರುವ ‘ರಾಣೆಬೆನ್ನೂರ ಕಾ ರಾಜಾ ಗಣಪತಿ’(ಅಯೋಧ್ಯಾ ಪ್ರತಿರೂಪ ಮಾದರಿಯ ಗಣಪತಿ)ಯ ಶೋಭಾಯಾತ್ರೆ ಅ.15ರಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ.
    ಮಾಜಿ ಸಚಿವ ಸಿ.ಟಿ.ರವಿ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಗರಸಭೆ ಕ್ರೀಡಾಂಗಣದಿಂದ ಹೊರಡುವ ಶೋಭಾಯಾತ್ರೆಯು ಹಳೇ ಪಿ.ಬಿ.ರಸ್ತೆಯಲ್ಲಿ ಸಾಗಿ ಕುರುಬಗೇರಿ ಕ್ರಾಸ್, ಸಾಲೇಶ್ವರ ದೇವಸ್ಥಾನ ಮೂಲಕ ಸಿದ್ದೇಶ್ವರ ದೇವಸ್ಥಾನ ತಲುಪುವುದು. ಅಲ್ಲಿಂದ ಪುನಃ ಹಳೇ ಪಿ.ಬಿ.ರಸ್ತೆಯಲ್ಲಿ ಹೊರಟು ಕುರುಬಗೇರಿ ಕ್ರಾಸ್, ದುರ್ಗಾ ಸರ್ಕಲ್, ಎಂ.ಜಿ.ರಸ್ತೆ, ಚತುರ್ಮುಖಿ ದೇವಸ್ಥಾನ, ದೊಡ್ಡಪೇಟೆ ರಸ್ತೆ, ಸುಭಾಸ ಚೌಕ, ಬಸವೇಶ್ವರ ದೇವಸ್ಥಾನ, ರೊಡ್ಡನವರ ಓಣಿ, ಕುಂಬಾರ ಓಣಿ, ಓಂ ಸರ್ಕಲ್, ರಂಗನಾಥ ನಗರ, ಸಂಗಮ ಸರ್ಕಲ್, ಪೋಸ್ಟ್ ಸರ್ಕಲ್, ಮೆಡ್ಲೇರಿ ಕ್ರಾಸ್, ಬಸ್‌ಸ್ಟ್ಯಾಂಡ್ ಸರ್ಕಲ್, ಹಳೇ ಪಿ.ಬಿ.ರಸ್ತೆಯಲ್ಲಿ ಸಾಗಿ ಹರಿಹರ ಬೈಪಾಸ್ ರಸ್ತೆಯ ಮೂಲಕ ತುಂಗಭದ್ರಾ ನದಿಯಲ್ಲಿ ಮೂರ್ತಿ ವಿಸರ್ಜನೆ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts