ಪ್ರತಿಭೆ ಅನಾವರಣಕ್ಕೆ ವೇದಿಕೆ ಸಹಕಾರಿ: ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ

New Project (11)
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಎಲೆಮರೆಯಲ್ಲಿನ ಪ್ರತಿಭಾನ್ವಿತರನ್ನು ಹಾಗೂ ಹಿರಿಯ ಕಲಾವಿದರನು ಗುರುತಿಸಿ, ಅವರಿಗೆ ವೇದಿಕೆ ಕಲ್ಪಿಸುವುದರಿಂದ ಯುವ ಪ್ರತಿಭೆಗಳಿಗೆ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗುತ್ತದೆ ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.

ಕಾಸರಗೋಡು ಪದ್ಮಗಿರಿ ಕಲಾ ಕುಟೀರದಲ್ಲಿ ರಂಗಚಿನ್ನಾರಿಯ 19ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಪತ್ರಕರ್ತ ರವೀಂದ್ರ ಜೋಶಿ ಶುಭಹಾರೈಸಿದರು. ನೇತ್ರ ತಜ್ಞ ಡಾ.ಅನಂತ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಪ್ರಶಸ್ತಿ ವಿಜೇತ ಸುಬ್ರಹ್ಮಣ್ಯ ಬಾಡೂರು, ಸಾಹಿತಿ ಉಮೇಶ ಮೈಸೂರು, ಉದಯ ಕುಮಾರ್ ಮನ್ನಿಪ್ಪಾಡಿ, ಜನಾರ್ದನ ಅಣಂಗೂರು, ದಿವ್ಯಾ ಗಟ್ಟಿ, ಶರಣ್ಯ, ನಾರಿ ಚಿನಾರಿಯ ಅಧ್ಯಕ್ಷೆ ಸವಿತಾ ಟೀಚರ್, ಯಕ್ಷಗಾನ ಕಲಾವಿದ ಸುಧಾಕರ ಸಾಲ್ಯಾನ್, ರಂಗಚಿನ್ನಾರಿ ನಿರ್ದೇಶಕರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ಸತ್ಯನಾರಾಯಣ ಉಪಸ್ಥಿತರಿದ್ದರು. ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಸ್ವಾಗತಿಸಿದರು. ಬಬಿತಾ ಆಚಾರ್ಯ ಬಾಡೂರು ಪ್ರಾರ್ಥಿಸಿದರು.

ಸಾಧಕರಿಗೆ ಸನ್ಮಾನ

ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಮಾಧವ ಪಾಟಾಳಿ ಅವರಿಗೆ ‘ಶ್ರೀ ಕೇಶವಾನಂದ ಭಾರತಿ ಪ್ರಶಸ್ತಿ’, ನಾಟಕ ಮತ್ತು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ರಾಮ್ ಎಲ್ಲಂಗಳ ಮತ್ತು ಸಂಗೀತ ಕ್ಷೇತ್ರದ ಸಾಧನೆಗಾಗಿ ಶಕುಂತಲಾ ಕೃಷ್ಣ ಭಟ್ ಅವರಿಗೆ ‘ರಂಗಚಿನ್ನಾರಿ ಪ್ರಶಸ್ತಿ’, ಸಿನಿಮಾ ಕ್ಷೇತ್ರದ ಸಾಧನೆಗಾಗಿ ಕಿರಣ್ ರಾಜ್, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ದೀಕ್ಷಾ ಕೆ. ಅವರಿಗೆ ‘ರಂಗಚಿನ್ನಾರಿ ಯುವ ಪ್ರಶಸ್ತಿ’ಯನ್ನು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ನೀಡಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net