16 C
Bangalore
Saturday, December 7, 2019

ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.

ರಾಣಿ ಚನ್ನಮ್ಮ ವಿವಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ 2.5 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಲಿಯಲು ಅವಶ್ಯ ಸೌಲಭ್ಯ, ಕೊಠಡಿಗಳು ಇಲ್ಲ. ಹತ್ತು ವರ್ಷಗಳು ಕಳೆದರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭೂಮಿ ಹಸ್ತಾಂತರಿಸುತ್ತಿಲ್ಲ. ಬದಲಾಗಿ ವಿವಿಧ ಕಾರಣ ನೀಡಿ ಸಮಸ್ಯೆ ಮುಂದುವರಿಸಿಕೊಂಡು ಹೋಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2008ರಲ್ಲಿ ಆರಂಭವಾದ ವಿಶ್ವವಿದ್ಯಾಲಯಕ್ಕೆ ಇದುವರೆಗೂ ಭೂಮಿ ಒದಗಿಸಿಲ್ಲ. ಇದರಿಂದ ವಿವಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಉಪನ್ಯಾಸಕರಿಗೆ ವಾರ್ಷಿಕ ಕೋಟ್ಯಂತರ ರೂ. ವೇತನ ನೀಡುತ್ತಿದೆ. ಆದರೆ, ವಿವಿ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುತ್ತಿಲ್ಲ ಎಂದು ಕಾರ್ಯಕರ್ತರು ದೂರಿದರು.
ಈಗಾಗಲೇ ರಾಣಿ ಚನ್ನಮ್ಮ ವಿವಿಗೆ ನೀಡಿರುವ ಅರಣ್ಯ ಇಲಾಖೆಯ ಭೂಮಿಯನ್ನು ಹಸ್ತಾಂತರಿಸಬೇಕು. ಇಲ್ಲವೇ ಪರ್ಯಾಯ ಭೂಮಿ ನೀಡಿ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿವಿ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರ್ಕಾರವು ತಕ್ಷಣದಿಂದಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಅನುದೀಪ ಕುಲಕರ್ಣಿ, ರೋಹಿತ್ ಎಂ., ಪ್ರಮೋದ ಬಾಬನ್ನವರ, ಶಿವಾನಂದ ಕಾಂಬಳೆ, ಸುರೇಶ ಜಬಗಿ, ರಾಜಶೇಖರ ರೆಡ್ಡಿ ಸೇರಿ ಇನ್ನಿತರರು ಇದ್ದರು.

ಪೊಲೀಸರ ದಬ್ಬಾಳಿಕೆಗೆ ಆಕ್ರೋಶ

ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುವ ಹಾಗಿಲ್ಲ ಎಂದು ಪೊಲೀಸರು ಹೇಳಿದ್ದಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಎಬಿವಿಪಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ ಅವರನ್ನು ಪೊಲೀಸರು ಎಳೆದುಕೊಂಡು ಹೋಗಿ ವಾಹನದಲ್ಲಿ ಕೂಡಿ ಹಾಕಿದ್ದರು. ಇದರಿಂದ ಕಾರ್ಯಕರ್ತರು, ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಹೋರಾಟ ತೀವ್ರಗೊಳಿಸಲು ಮುಂದಾಗುತ್ತಿದ್ದಂತೆ ವಶಕ್ಕೆ ಪಡೆದಿರುವವರನ್ನು ಬಿಡುಗಡೆಗೊಳಿಸಿದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...