20.4 C
Bangalore
Monday, December 9, 2019

ಕರ್ನಾಟಕಕ್ಕೆ ಬೃಹತ್ ಮುನ್ನಡೆ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

| ಇಮಾಮಹುಸೇನ್ ಗೂಡುನವರ

ಬೆಳಗಾವಿ: ಕುಂದಾನಗರಿಯ ಬೌಲರ್ ರೋನಿತ್ ಮೋರೆ ಮಾರಕ ದಾಳಿಯ (52ಕ್ಕೆ 5) ನೆರವಿನಿಂದ 41 ಬಾರಿಯ ಚಾಂಪಿಯನ್ ಮುಂಬೈ ತಂಡದ ಮೇಲೆ ಪ್ರಾಬಲ್ಯ ಸಾಧಿಸಿದ ಆತಿಥೇಯ ಕರ್ನಾಟಕ ರಣಜಿ ಟ್ರೋಫಿ ಟೂರ್ನಿಯ ತನ್ನ 2ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಅಮೂಲ್ಯ ಮುನ್ನಡೆ ಸಂಪಾದಿಸಿದೆ. ಮೊದಲ ಇನಿಂಗ್ಸ್​ನಲ್ಲಿ 195 ರನ್​ಗಳ ಮುನ್ನಡೆ ಸಾಧಿಸಿರುವ ಕರ್ನಾಟಕ ತಂಡ, ಶುಕ್ರವಾರ ಭೋಜನ ವಿರಾಮದ ವೇಳೆಗೆ ಉತ್ತಮ ಮೊತ್ತ ಪೇರಿಸಿ ಮುಂಬೈಗೆ ಬೃಹತ್ ಸವಾಲು ಒಡ್ಡುವ ಗುರಿಯಲ್ಲಿದೆ.

ಆಟೋನಗರದ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 2 ವಿಕೆಟ್​ಗೆ 99 ರನ್​ಗಳಿಂದ 3ನೇ ದಿನದಾಟ ಆರಂಭಿಸಿದ ಬಲಿಷ್ಠ ಮುಂಬೈ, ಕರ್ನಾಟಕದ ಶಿಸ್ತಿನ ದಾಳಿಗೆ 205 ರನ್​ಗೆ ಆಲೌಟ್ ಆಯಿತು. ದೊಡ್ಡ ಮೊತ್ತದ ಮುನ್ನಡೆ ಕಂಡ ಸಂಭ್ರಮದಲ್ಲಿ 2ನೇ ಇನಿಂಗ್ಸ್ ಆರಂಭಿಸಿರುವ ರಾಜ್ಯ ತಂಡ 34 ಓವರ್​ಗಳಲ್ಲಿ 3 ವಿಕೆಟ್​ಗೆ 81 ರನ್ ಬಾರಿಸಿದ್ದು, ಒಟ್ಟಾರೆ 276 ರನ್​ಗಳ ಮುನ್ನಡೆಯಲ್ಲಿದೆ.

ಗುರುವಾರ ಬ್ಯಾಟಿಂಗ್ ಮುಂದುವರಿಸಿದ ಮುಂಬೈ ತಂಡ 20 ರನ್ ಗಳಿಸುವುದರೊಳಗೆ 3 ಪ್ರಮುಖ ವಿಕೆಟ್ ಕಳೆದುಕೊಂಡಿತು. 3ನೇ ವಿಕೆಟ್​ಗೆ ಜಯ್ ಬಿಷ್ಟಾ-ಸೂರ್ಯಕುಮಾರ್ ಯಾದವ್ ಜೋಡಿ 18 ರನ್ ಸೇರಿಸಿತು. ಶತಕ ಬಾರಿಸುವ ಉತ್ಸಾಹದಲ್ಲಿದ್ದ ಜಯ್ ಬಿಷ್ಟಾ (70 ರನ್, 118 ಎಸೆತ, 11 ಬೌಂಡರಿ) ಪ್ರಸಿದ್ಧಕೃಷ್ಣ ಬೌಲಿಂಗ್​ನಲ್ಲಿ ವಿಕೆಟ್ಕೀಪರ್ ಶರತ್​ಗೆ ಕ್ಯಾಚ್ ನೀಡಿದರು. ಬಳಿಕ ರೋನಿತ್ ಮೋರೆ ಅಪಾಯಕಾರಿ ಆಟಗಾರ ಸೂರ್ಯಕುಮಾರ್​ಗೆ (17) ಪೆವಿಲಿಯನ್ ಹಾದಿ ತೋರಿಸಿದರು. ಅನುಭವಿ ಆದಿತ್ಯ ತಾರೆ ಕೇವಲ 1 ರನ್ ಬಾರಿಸಿ ಮೋರೆಗೆ ವಿಕೆಟ್ ನೀಡಿದರು. ಇದರಿಂದಾಗಿ ಒಂದು ಹಂತದಲ್ಲಿ 2 ವಿಕೆಟ್​ಗೆ 117 ರನ್ ಗಳಿಸಿದ್ದ ಮುಂಬೈ, 2 ರನ್ ಸೇರಿಸುವ ವೇಳೆ 119 ರನ್​ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

6ನೇ ವಿಕೆಟ್​ಗೆ ಸಿದ್ಧೇಶ್ ಲಾಡ್-ಶಿವಂ ದುಬೆ ಜೋಡಿ 32 ರನ್ ಸೇರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿ ಭರವಸೆ ಮೂಡಿಸಿದರೂ, ಪ್ರಸಿದ್ಧಕೃಷ್ಣ ಬೌಲಿಂಗ್​ನಲ್ಲಿ ಸಿದ್ದೇಶ್ ಲಾಡ್ ಔಟಾದರು. ಮೊದಲ ಅವಧಿಯ ಆಟದಲ್ಲಿ ಕರ್ನಾಟಕ ಕೇವಲ 67 ರನ್ ನೀಡಿ 4 ವಿಕೆಟ್ ಉರುಳಿಸಿತು. 166 ರನ್​ಗೆ 6 ವಿಕೆಟ್ ಕಳೆದುಕೊಂಡು ಭೋಜನಕ್ಕೆ ತೆರಳಿದ್ದ ಮುಂಬೈ ತಂಡವನ್ನು ಬಳಿಕ ಕರ್ನಾಟಕ ಸಲೀಸಾಗಿ ಆಲೌಟ್ ಮಾಡಿತು. ನಾಯಕ ಧವಳ್ ಕುಲಕರ್ಣಿ (19) ಹಾಗೂ ಶಿವಂ ದುಬೆ (16) ಶ್ರೇಯಸ್ ಗೋಪಾಲ್​ಗೆ ವಿಕೆಟ್ ನೀಡಿದರು. 200ರ ಗಡಿ ದಾಟುವುದು ದುಸ್ತರವಾಗಿದ್ದ ಹಂತದಲ್ಲಿ ಆಸರೆಯಾದ ಶಮ್್ಸ ಮುಲಾನಿ (34) ಹಾಗೂ ಕರ್ಷ್ ಕೊಠಾರಿ ಜೋಡಿ 9ನೇ ವಿಕೆಟ್​ಗೆ 37 ರನ್ ಜತೆಯಾಟವಾಡಿತು.

ಒಟ್ಟು 276 ರನ್ ಮುನ್ನಡೆ

ಫಾಲೋಆನ್ ಹೇರುವ ಅವಕಾಶವಿದ್ದರೂ, 2ನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಡಿ.ನಿಶ್ಚಲ್ (11) ಹಾಗೂ ಶಿಶಿರ್ ಭವಾನಿ (5) ವಿಕೆಟ್​ಗಳನ್ನು ಆರಂಭದಲ್ಲಿಯೇ ಕಳೆದುಕೊಂಡಿತು. ಧವಳ್ ಕುಲಕರ್ಣಿ ನೀಡಿದ ಆಘಾತದಿಂದ 18 ರನ್​ಗೆ 2 ವಿಕೆಟ್ ಕಳೆದುಕೊಂಡಿದ್ದ ವೇಳೆ ಕೌನೇನ್ ಅಬ್ಬಾಸ್ (25ರನ್, 75 ಎಸೆತ, 1 ಬೌಂಡರಿ) ಹಾಗೂ ಮೊದಲ ಇನಿಂಗ್ಸ್ ಶತಕ ಸಾಧಕ ಕೆವಿ ಸಿದ್ಧಾರ್ಥ 3ನೇ ವಿಕೆಟ್​ಗೆ 58 ರನ್ ಸೇರಿಸಿ ಚೇತರಿಕೆ ನೀಡಿದರು. ದಿನದಾಟ ಮುಗಿಯಲು ಕೆಲ ಓವರ್​ಗಳಿರುವಾಗ ಅಬ್ಬಾಸ್ ಔಟಾದರೆ, ಸಿದ್ಧಾರ್ಥ್ ಹಾಗೂ ಅನುಭವಿ ಸ್ಟುವರ್ಟ್ ಬಿನ್ನಿ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನನ್ನ ತವರಿನ ಮೈದಾನದಲ್ಲಿ ಹೆತ್ತವರ ಎದುರು ರಾಜ್ಯ ತಂಡದ ಪರ 5 ವಿಕೆಟ್ ಪಡೆದಿರುವುದಕ್ಕೆ ಅಪಾರ ಸಂತಸವಾಗಿದೆ.

| ರೋನಿತ್ ಮೋರೆ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...