Ranya Rao: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಾ.14ರಂದು ವಿಚಾರಣೆ ನಡೆಸಿದ್ದ ಬೆಂಗಳೂರಿನ ಅಪರಾಧಗಳ ನ್ಯಾಯಾಲಯ, ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಇದನ್ನೂ ಓದಿ: ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕುರಿತು ಪೂರ್ವಭಾವಿ ಸಭೆ
ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನು ಅರ್ಜಿ ಆದೇಶವನ್ನು ಇದೀಗ ಮಾ.27ಕ್ಕೆ ಕಾಯ್ದಿರಿಸಿದೆ. ಈ ದಿನದಂದು ಆದೇಶ ಪ್ರಕಟಿಸುವುದಾಗಿ ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ತಿಳಿಸಿದೆ.
ಏನಿದು ಪ್ರಕರಣ?
ಮಾ.03ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರಿಂದ 14.56 ಕೋಟಿ ರೂ. ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡ ಪೊಲೀಸರು, ಕೆಲವೇ ಕ್ಷಣದಲ್ಲಿ ನಟಿಯನ್ನು ಬಂಧಿಸಿ, ತನಿಖೆಗೆ ಒಳಪಡಿಸಿದರು. ಒಂದೇ ವರ್ಷದಲ್ಲಿ 27 ಬಾರಿ ದುಬೈಗೆ ಭೇಟಿ ನೀಡಿದ್ದ ಚೆಲುವೆ, 14.2 ಕೆಜಿ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಇಷ್ಟೊಂದು ಚಿನ್ನವನ್ನು ಹೇಗೆ ಸಾಗಿಸುತ್ತಿದ್ದರು? ಇಂಥಾ ಕೆಲಸಕ್ಕೆ ‘ಮಾಣಿಕ್ಯ’ ನಟಿ ಕೈಹಾಕಿದ್ದೇಕೆ? ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಸದ್ಯ ಇದಕ್ಕೆ ಉತ್ತರ ಹುಡುಕುತ್ತಿರುವ ಖಾಕಿ ಪಡೆ, ಪಾತ್ರಧಾರಿ ಹಿಂದಿರುವ ಸೂತ್ರಧಾರಿಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).