26.8 C
Bangalore
Friday, December 13, 2019

ಉನ್ನಾವೊ ಅತ್ಯಾಚಾರ ಪ್ರಕರಣ: ಸೆಂಗಾರ್ ಅಮಾನತು, ಶಾಸಕನ ವಿರುದ್ಧ ಬಿಜೆಪಿ ಕಠಿಣ ಕ್ರಮ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಲಖನೌ: ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಹಾಗೂ ಸಂತ್ರಸ್ತೆ, ಆಕೆ ಕುಟುಂಬದವರ ಹತ್ಯೆಗೆ ಸಂಚು ನಡೆಸಿದ ಆರೋಪಕ್ಕೆ ಗುರಿಯಾಗಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್​ರನ್ನು ಬಿಜೆಪಿ ಮಂಗಳವಾರ ಅಮಾನತು ಮಾಡಿದೆ. ಕುಲದೀಪ್ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ. ‘ತಪು್ಪ ಎಸಗಿದ್ದರೆ ಖಂಡಿತ ಶಿಕ್ಷೆ ಆಗುತ್ತದೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಸದ್ಯ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಸಂತ್ರಸ್ತೆಯ ಬೆಂಬಲಕ್ಕೆ ಉತ್ತರ ಪ್ರದೇಶ ಸರ್ಕಾರ ನಿಂತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರದೇವ ಸಿಂಗ್ ತಿಳಿಸಿದ್ದಾರೆ. ಈ ಪ್ರಕರಣವನ್ನು ಬಿಎಸ್​ಪಿ, ಎಸ್​ಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯಗೊಳಿಸುತ್ತಿವೆ. ಆದರೆ, ಈ ಪ್ರಕರಣಗಳ ಕುರಿತು ಬಿಜೆಪಿ ಸೂಕ್ಷ್ಮತೆ ಹೊಂದಿದೆ. ಅಪರಾಧಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದ ರಾಯ್ಬರೇಲಿ ಬಳಿ ಸಂತ್ರಸ್ತ ಯುವತಿ ತೆರಳುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಂತ್ರಸ್ತೆಯ ಇಬ್ಬರು ಸಂಬಂಧಿಕರು ಸಾವನ್ನಪಿದ್ದರು. ಸಂತ್ರಸ್ತೆ ಮತ್ತು ವಕೀಲರಿಗೆ ತೀವ್ರ ಗಾಯವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದವು. ಅಪಘಾತದಲ್ಲಿ ಶಾಸಕರ ಕೈವಾಡ ಇದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಆಗ್ರಹ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕುಲದೀಪ್​ರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಿಜೆಐಗೆ ಪತ್ರ ಬರೆದಿದ್ದ ಸಂತ್ರಸ್ತೆ

ಆರೋಪಿ ಮತ್ತು ಆತನ ಬೆಂಬಲಿಗರಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಉನ್ನಾವ್ ಅತ್ಯಾಚಾರದ ಸಂತ್ರಸ್ತೆ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ಗೆ ಪತ್ರ ಬರೆದಿದ್ದಳು. ರಾಯ್ಬರೇಲಿ ಬಳಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆಯುವುದಕ್ಕೂ ಕೆಲ ದಿನ ಮೊದಲು ಈ ಪತ್ರ ರವಾನಿಸಿದ್ದಳು ಎನ್ನಲಾಗಿದೆ. ಹಿಂದಿಯಲ್ಲಿದ್ದ ಈ ಪತ್ರವನ್ನು ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿದ ಸಿಜೆಐ, ಈ ಪತ್ರದ ಬಗ್ಗೆ ಟಿಪ್ಪಣಿ ಮಾಡಿ ತಮಗೆ ಕಳುಹಿಸುವಂತೆ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನಲ್ಲಿ ಗದ್ದಲ

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಅಪಘಾತ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಶಾಸಕ ಕುಲದೀಪ್ ಸೆಂಗಾರ್​ರನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್, ಎಸ್​ಪಿ ಹಾಗೂ ಬಿಎಸ್​ಪಿ ಸಂಸದರು ಧರಣಿ ನಡೆಸಿದರು. ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಅಪಘಾತದಲ್ಲಿ ಭಾಗಿಯಾಗಿರುವ ಲಾರಿ ಸಮಾಜವಾದಿ ಪಕ್ಷದ ಕಾರ್ಯಕರ್ತನಿಗೆ ಸೇರಿದ್ದು ಎಂದು ಬಿಜೆಪಿ ಸಂಸದರು ಪ್ರತ್ಯಾರೋಪ ಮಾಡಿದರು. ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....