ಶಾಸಕ ಮುನಿರತ್ನಗೆ ಮತ್ತೊಂದು ಶಾಕ್​: ಅತ್ಯಾಚಾರ ಆರೋಪ ಮಾಡಿದ ಮಹಿಳೆ, ಎಫ್​ಐಆರ್​ ದಾಖಲು

mla

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಮತ್ತೊಂದು ಶಾಕ್​ ಎದುರಾಗಿದೆ. ಮುನಿರತ್ನ ಸೇರಿದಂತೆ ಏಳು ಮಂದಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಎಫ್​ಐಆರ್​ ದಾಖಲಾಗಿದೆ.

ಮಹಿಳೆಯೊಬ್ಬರು ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಿಸಿರುವ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಾಗಿದೆ. ಮುನಿರತ್ನ ಅವರು ಒಂದು ಸ್ಥಳಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದರು. ಅಲ್ಲದೆ, ವಿಡಿಯೋ ಮಾಡಿಕೊಟ್ಟುಕೊಂಡು ಆಗಾಗ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾರೆ. ವಿಡಿಯೋವನ್ನು ಪತ್ನಿ ಮತ್ತು ಮಕ್ಕಳಿಗೆ ತೋರಿಸುವುದಾಗಿ ಬೆದರಿಕೆ ಹಾಕಿ ನನ್ನನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನನ್ವಯ ಮುನಿರತ್ನ ಸೇರಿ ಏಳು ಮಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಎಫ್​ಐಆರ್​ನಲ್ಲಿ ಮುನಿರತ್ನ ಅವರನ್ನು ಎ1 ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ. ಉಳಿದಂತೆ ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕೇಶ್ ಎನ್ನುವವರ ವಿರುದ್ಧವೂ ಎಫ್​ಐಆರ್ ದಾಖಲಾಗಿದೆ.

ಇಂದು ಜಾಮೀನು ಅರ್ಜಿ ತೀರ್ಪು
ಬಿಬಿಎಂಪಿ ಮಾಜಿ ಸದಸ್ಯನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಬುಧವಾರ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುನಿರತ್ನ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದರು. ವಾದ-ಪ್ರತಿವಾದ ಆಲಿಸಿದ ಮೇಲೆ ಗುರುವಾರಕ್ಕೆ ತೀರ್ಪು ಕಾಯ್ದಿರಿಸಿದರು. ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದರು. ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆ ಆಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ 3 (1) ಸೆಕ್ಷನ್ ಅನ್ವಯಿಸುವುದಿಲ್ಲ ಎಂದು ಎಸ್‌ಪಿಪಿ ಒಪ್ಪಿಕೊಂಡಿದ್ದಾರೆ. 41ಎ ಅಡಿ ನೋಟಿಸ್ ನೀಡಬೇಕಿತ್ತು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು.

ಬಿಬಿಎಂಪಿ ಗುತ್ತಿಗೆದಾರ ವೇಲು ನಾಯ್ಕರ್‌ಗೆ ಕಿರುಕುಳ, ಜಾತಿ ನಿಂದನೆ ಮತ್ತು ಮಹಿಳೆ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ಕೋಲಾರದಲ್ಲಿ ಮುನಿರತ್ನ ಅವರನ್ನು ಸೆ.14ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಮೊದಲ ಎಫ್‌ಐಆರ್‌ನಲ್ಲಿ ಮುನಿರತ್ನ ವಿರುದ್ಧ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ಯಾರು ಏನೇ ಅಂದುಕೊಳ್ಳಲಿ ಆ ವಿಚಾರದಲ್ಲಿ ನಾನು ನಾಚಿಕೆಪಡುವುದಿಲ್ಲ! ರೋಹಿತ್​ ಅಚ್ಚರಿ ಹೇಳಿಕೆ

ಆ ಗಾಯಕಿಯೇ ಜಯಂ ರವಿ ಡಿವೋರ್ಸ್​ಗೆ ಕಾರಣ? ಗೋವಾ ರಹಸ್ಯ ಬಯಲು, ಗಂಡನ ಮೇಲೆ ಆರತಿ ಆಕ್ರೋಶ

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…