21.7 C
Bengaluru
Tuesday, January 21, 2020

ಅತ್ಯಾಚಾರಿಗೆ 7 ವರ್ಷ ಜೈಲು, 50 ಸಾವಿರ ರೂ. ದಂಡ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಶಿವಮೊಗ್ಗ: ಭದ್ರಾವತಿ ಸಿಂಗನಮನೆ ಚೌಳಿ ಕ್ಯಾಂಪ್ ಚೌಡಮ್ಮ ದೇವಸ್ಥಾನದ ಮುಖ್ಯ ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಅಪ್ರಾಪ್ತೆ ಅತ್ಯಾಚಾರ ಮಾಡಿದ್ದ ಆರೋಪಿಗೆ ಒಂದನೇ ಹೆಚ್ಚುವರಿ ವಿಶೇಷ(ಪೋಕ್ಸೋ) ಸತ್ರ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಬಿಆರ್​ಪಿ ಸಮೀಪದ ಸಿಂಗನಮನೆ ನಿವಾಸಿ ಇಮ್ಮು ಅಲಿಯಾಸ್ ಇಮ್ರಾನ್ (22) ಶಿಕ್ಷೆಗೆ ಒಳಗಾದ ಆರೋಪಿ. ಅಪ್ರಾಪ್ತೆ ಕುಟುಂಬದವರಿಗೆ ಪರಿಚಯಸ್ಥನಾಗಿದ್ದ ಈತ 2014 ನವೆಂಬರ್ 7ರಂದು ಸಂಜೆ ಪಾಳು ಮನೆಗೆ ಕರೆದೊಯ್ದು, ಮತ್ತು ಬರುವ ಔಷಧಿಯಿಂದ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಿದ್ದ. ಬಳಿಕ ಚಾಕುವಿನಿಂದ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ಬೆಂಕಿಯಲ್ಲಿ ಕಾದ ತಂತಿಯಿಂದ ಬಲಗೈ ಮೇಲೆ ಬರೆ ಹಾಕಿದ್ದ.

ಅಪ್ರಾಪ್ತೆ ಕುಟುಂಬದವರು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಶುಭಾ ಗೌಡರ್ 7 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಕೆ.ಮೂರ್ತಿರಾವ್ ವಾದ ಮಂಡಿಸಿದ್ದರು.

ಕಳ್ಳರ ಬಂಧನ: ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾಂಗಲ್ಯ ಸರ, ಮೊಬೈಲ್ ಹಾಗೂ ಚಿತ್ರದುರ್ಗದಲ್ಲಿ ಬೈಕ್ ಕಳವು ಮಾಡಿದ್ದ ಇಬ್ಬರನ್ನು ಶಿವಮೊಗ್ಗದ ಕೀರ್ತಿನಗರದಲ್ಲಿ ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿಪ್ಪು ನಗರದ ಆಸೀಫ್(23), ಹಾಯ್ಹೊಳೆ ಜಾಕೀರ್(19) ಬಂಧಿತರು. ಆರೋಪಿಗಳು ಶಿವಮೊಗ್ಗದ ಎಲ್​ಬಿಎಸ್ ನಗರದಲ್ಲಿ ಎರಡು ತಿಂಗಳ ಹಿಂದೆ ಮಹಿಳೆಗೆ ಚಾಕು ತೋರಿಸಿ 8 ಗ್ರಾಂ ಮಾಂಗಲ್ಯ ಸರ, ಮೊಬೈಲ್ ಹಾಗೂ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಅಲ್ಲದೆ, ಚಿತ್ರದುರ್ಗದಲ್ಲಿ ಬೈಕ್ ಕಳವು ಮಾಡಿದ್ದರು ಎನ್ನಲಾಗಿದೆ. ಭಾನುವಾರ ಕೀರ್ತಿನಗರದಲ್ಲಿ ಅನುಮಾನಾಸ್ಪದವಾಗಿ ಬೈಕ್​ನಲ್ಲಿ ಸುತ್ತಾಡುತ್ತಿದ್ದ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...