ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು

Court
Published on

ಬೆಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸಗಿ ಯಾರಿಗೂ ಹೇಳದಂತೆ ಬ್ಲ್ಯಾಕ್‌ಮೇಲ್ ಮಾಡಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಎ್ಟಿಎಸ್‌ಸಿ 3ನೇ ಕೋರ್ಟ್ ತೀರ್ಪು ನೀಡಿದೆ.

ಹನುಮಂತನಗರದ ಸುಂಕೇನಹಳ್ಳಿ ನಿವಾಸಿ ಕೆ.ಎಸ್.ರಾಘವೇಂದ್ರ ಅಪರಾಧಿ. 2021ರಲ್ಲಿ ನೌಕರಿ ಅರಸಿ ನಗರಕ್ಕೆ ಬಂದು ಸಂತ್ರಸ್ತೆಯ ಪಾಲಕರ ಆಶ್ರಯ ಪಡೆದಿದ್ದ. ಈ ವೇಳೆ 10ನೇ ತರಗತಿಯಲ್ಲಿ ಓದುತ್ತಿದ್ದ ಸಂತ್ರಸ್ತೆ ಮನೆಯಲ್ಲಿ ಒಂಟಿಯಾಗಿ ಇರುವಾಗ ಆಕೆಯ ಜತೆ ದೈಹಿಕ ಸಂಪರ್ಕ ಹೊಂದಿದ್ದ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದ. ಸಂತ್ರಸ್ತೆಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಪಾಲಕರು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗರ್ಭೀಣಿ ಆಗಿರುವುದು ಬೆಳಕಿಗೆ ಬಂದಿತ್ತು. ಆಗಲೂ ಅಪರಾಧಿ ರಾಘವೇಂದ್ರ, ಸಂತ್ರಸ್ತೆ ಪಾಲಕರಿಗೂ ಬ್ಲ್ಯಾಕ್‌ಮೇಲ್ ಮಾಡಿದ್ದ.

ಮಗು ಜನಿಸಿದ ಮೇಲೆ ನನಗೆ ಕೊಡುವಂತೆ ಷರತ್ತು ವಿಧಿಸಿದ್ದ. 2022ರ ನವೆಂಬರ್ 29ರಂದು ಕಿಮ್ಸ್ ಆಸ್ಪತ್ರೆಯಲ್ಲಿ ಸಂತ್ರಸ್ತೆ, ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ವಿಚಾರ ತಿಳಿದ ಹನುಮಂತನಗರ ಠಾಣೆ ಅಂದಿನ ಇನ್‌ಸ್ಪೆಕ್ಟರ್ ಬಿ.ಎನ್. ಸಂದೀಪ್ ಕುಮಾರ್ ನೇತೃತ್ವದ ತಂಡ, ರಾಘವೇಂದ್ರನನ್ನು ಬಂಧಿಸಿದ್ದರು. ತನಿಖೆ ನಡೆಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.

ಪಬ್ಲಿಕ್ ಪ್ರಾಸಿಕ್ಯೂಟರ್ ಗೀತಾ ರಾಮಕೃಷ್ಣ ಗೊರವರ, ಸಂತ್ರಸ್ತೆ ಪರ ವಾದ ಮಂಡಿಸಿದ್ದರು. ನ್ಯಾಯಾಧೀಶರಾದ ಇಷ್ರತ್ ಜಹಾನ್ ಅರ ಅವರು, ವಾದ-ಪ್ರತಿವಾದ ಆಲಿಸಿದರು. ರಾಘವೇಂದ್ರ ಅಪರಾಧಿ ಎಂದು ೋಷಣೆ ಮಾಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿ 25 ಸಾವಿರ ರೂ. ದಂಡ ವಿಧಿಸಿದರು. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net