More

    ಪ್ರಯೋಗಾಲಯ ಶೀಘ್ರ ಸ್ಥಾಪನೆ

    ಮದ್ದೂರು: ತಾಲೂಕಿನಲ್ಲಿ ತೆಂಗಿನ ಬೆಳೆಗೆ ಸಂಬಂಧಿಸಿದ ರೋಗ ನಿಯಂತ್ರಣಕ್ಕೆ ರೋಗ ಪತ್ತೆ ಪ್ರಯೋಗಾಲಯವನ್ನು ಶೀಘ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

    ತಾಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಗುರುವಾರ ತೆಂಗಿನಲ್ಲಿ ಕಪ್ಪು ತಲೆ ಹುಳುವಿನ ನಿಯಂತ್ರಣಕ್ಕೆ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ತಾಲೂಕಿನಲ್ಲಿ ಇತ್ತೀಚೆಗೆ ತೆಂಗಿನ ಮರಗಳಿಗೆ ಕಪ್ಪು ತಲೆ ಹುಳುವಿನ ರೋಗ ಬಾಧೆ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿರುವುದರಿಂದ ತೆಂಗು ಬೆಳೆಗಾರರು ಮಂಡ್ಯಕ್ಕೆ ಹೋಗುವ ಬದಲಿ ರೋಗ ನಿಯಂತ್ರಣಕ್ಕೆ ತಾಲೂಕಿನಲ್ಲೇ ಪ್ರಯೋಗಾಲಯವನ್ನು ತೆರೆಯಲು ಅಗತ್ಯ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.

    ಇಲಾಖೆಯ ಅಧಿಕಾರಿಗಳು ಕಪ್ಪು ತಲೆ ಹುಳುವಿನ ರೋಗದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಜತೆಗೆ ಇಲಾಖೆಯಿಂದ ಬರುವ ಸೌಲಭ್ಯಗಳನ್ನು ಸಮರ್ಪಕವಾಗಿ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ರೈತರು ಕೂಡ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವ ಜತೆಗೆ ತಾವು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ರೋಗಗಳು ಬಾರದಂತೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ತಿಳಿ ಹೇಳಿದರು.

    ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ತಾಪಂ ಮಾಜಿ ಸದಸ್ಯ ಚಲುವರಾಜು, ಸಂಪತ್‌ಕುಮಾರ್ ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts