ಸಾಮಿ ಸಾಮಿ ಅಂತ ಕುಣಿದದ್ದೇ ತಪ್ಪಾಯ್ತಾ..? ರಶ್ಮಿಕಾ ಮಂದಣ್ಣ ಆಸ್ಪತ್ರೆಗೆ ದಾಖಲು!

Rashmika Mandana
Published on

ಬೆಂಗಳೂರು: ನ್ಯಾಷನಲ್ ಕ್ರಷ್, ಕನ್ನಡತಿ ರಶ್ಮಿಕಾ ಮಂದಣ್ಣ ಮೊಣಕಾಲಿನ ನೋವಿನ ಸಮಸ್ಯೆಯಿಂದ ಹೈದರಾಬಾದಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಹುಭಾಷಾ ನಟಿಗೆ ಏನಾಗಿದೆ ಎಂಬುವುದನ್ನು ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಮಾಹಿತಿ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ನಿರಂತರವಾಗಿ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಮೊಣಕಾಲಿನ ನೋವಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಡಾ. ಗುರುವಾ ರೆಡ್ಡಿ ‘ಸಾಮಿ ಸಾಮಿ ಅಂತ ಮೊಣಕಾಲಿಗೆ ಭಾರ ಹಾಕಿ ಡಾನ್ಸ್ ಮಾಡಿದ್ದೀರಿ. ಅದಕ್ಕಾಗಿ ಈ ನೋವು ಬಂದಿದೆ’ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ದೇಶದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ರಶ್ಮಿಕಾ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಚಿಕಿತ್ಸೆ ನೀಡುತ್ತಿರುವ ವೈದ್ಯರು ನಟಿ ಆರೋಗ್ಯವಾಗಿದ್ದಾರೆ ಎನ್ನುತ್ತಿದ್ದಂತೆ ಸಮಾಧಾನಗೊಂಡಿದ್ದಾರೆ.

ಮೊಣಕಾಲಿಗೆ ಹೆಚ್ಚು ಕೆಲಸ ಕೊಟ್ಟಿರುವುದರಿಂದ ರಶ್ಮಿಕಾ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದರು. ಅವರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿದ್ದೇವೆ. ರಶ್ಮಿಕಾ ಚೇತರಿಸಿಕೊಳ್ಳುತ್ತಿದ್ದು, ಸದ್ಯದಲ್ಲೇ ಮತ್ತೆ ಶೂಟಿಂಗ್​​ನಲ್ಲಿ ಪಾಲ್ಗೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net